ADVERTISEMENT

ಆಹಾರ ಸಂರಕ್ಷಣೆ: ಸಿಎಂಗೆ ಮನವಿ:ಬಿಸಾಡುವ ಹಕ್ಕು ನಮಗಿಲ್ಲ-ಅಭಿಯಾನ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2012, 8:30 IST
Last Updated 17 ಆಗಸ್ಟ್ 2012, 8:30 IST

ಕುಶಾಲನಗರ: `ತಿನ್ನುವ ಹಕ್ಕಿದೆ, ಬಿಸಾಡುವ ಹಕ್ಕು ನಮಗಿಲ್ಲ~ ಎಂಬ ಘೋಷಣೆಯಡಿ ಕುಶಾಲನಗರ ಆಹಾರ ಸಂರಕ್ಷಣಾ ಅಭಿಯಾನ ಸಮಿತಿ ವತಿಯಿಂದ ನಡೆಸುತ್ತಿರುವ ಆಹಾರ ಅಪವ್ಯಯ ತಡೆ ಜಾಗೃತಿ ಅಭಿಯಾನವನ್ನು ರಾಜ್ಯದಲ್ಲಿ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ ನೇತೃತ್ವದಲ್ಲಿ ಆಹಾರ ಸಂರಕ್ಷಣಾ ಅಭಿಯಾನ ಸಮಿತಿಯ ಸಂಚಾಲಕ ಎನ್.ಕೆ.ಮೋಹನ್‌ಕುಮಾರ್ ಅವರು ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ಸರ್ಕಾರ ರಾಜ್ಯದಲ್ಲಿ ಆಹಾರ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮನವಿ ಸಲ್ಲಿಸಿದರು.

ಭವಿಷ್ಯದಲ್ಲಿ ಎದುರಾಗಬಹುದಾದ ಆಹಾರ ಸಮಸ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಅಭಿಯಾನಕ್ಕೆ ಸರ್ಕಾರ ಕೈಜೋಡಿಸಬೇಕು ಎಂದು ದೊರೆಸ್ವಾಮಿ ಅವರು ಮುಖ್ಯಮಂತ್ರಿ ಶೆಟ್ಟರ್‌ಗೆ ಮನವಿ ಮಾಡಿದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈ ಅಭಿಯಾನ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಮೋಹನ್ ಕುಮಾರ್ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.