ADVERTISEMENT

ಎಚ್ಚರಿಕೆ ವಹಿಸಿ ಕೆಲಸ ಮಾಡಿ

ಜಿಲ್ಲಾ ಸಹಾಯಕ ಚುನಾವಣಾಧಿಕಾರಿ ಡಾ.ಶಿವಶಂಕರ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2013, 6:06 IST
Last Updated 10 ಏಪ್ರಿಲ್ 2013, 6:06 IST

ಮಡಿಕೇರಿ: ವಿಧಾನಸಭೆ ಚುನಾವಣೆಗೆ ಏ. 10ರಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದ್ದು, ವ್ಯವಸ್ಥಿತವಾಗಿ ಚುನಾವಣೆ ನಡೆಸಲು ಚುನಾವಣಾ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಜಿಲ್ಲಾ ಸಹಾಯಕ ಚುನಾವಣಾಧಿಕಾರಿ ಡಾ.ಎನ್. ಶಿವಶಂಕರ ಅವರು ನಿರ್ದೇಶನ ನೀಡಿದರು.
ನಗರದ ಕೋಟೆ ವಿಧಾನ ಸಭಾಂಗಣದಲ್ಲಿ ಚುನಾವಣಾ ಅಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

ಏ. 10ರಿಂದ ಪ್ರತಿದಿನ ವಿವಿಧ ತಂಡಗಳು ಮಡಿಕೇರಿಯಲ್ಲಿ ಸ್ಥಾಪಿಸಲಾಗಿರುವ ಎಂಸಿಎಂಸಿ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ: 08272-220302ಗೆ ಮಾಹಿತಿ ನೀಡುವುದರ ಜೊತೆಗೆ 228800ಗೆ ಫ್ಯಾಕ್ಸ್ ಮೂಲಕ ಪ್ರತಿಯೊಬ್ಬ ಅಭ್ಯರ್ಥಿಯ ದಿನನಿತ್ಯದ ಮಾಹಿತಿ ಒದಗಿಸಬೇಕು. ಹಾಗೆಯೇ ತಮ್ಮ ವ್ಯಾಪ್ತಿಯ ಚುನಾವಣಾಧಿಕಾರಿಗೆ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದರು.

ಉಪ ವಿಭಾಗಾಧಿಕಾರಿ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಿ.ಪ್ರಭು ಅವರು ಮಾತನಾಡಿ, ಚುನಾವಣೆಗೆ ನಿಯೋಜಿಸುವ ನಾನಾ ತಂಡಗಳ ಅಧಿಕಾರಿಗಳು ಪ್ರತಿನಿತ್ಯ ತಮ್ಮ ವ್ಯಾಪ್ತಿಯ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ವಿ.ಅಜ್ಜಪ್ಪ  ಮಾತನಾಡಿದರು.

ಲೆಕ್ಕ ಪರಿಶೀಲನಾ ಸಮಿತಿಯ ಹಿರಿಯ ಅಧಿಕಾರಿ ಶ್ರಿನಿವಾಸರಾವ್ ಅವರು ವಿವಿಧ ತಂಡಗಳ ಕಾರ್ಯನಿರ್ವಹಣೆ ಬಗ್ಗೆ ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ಮಾಹಿತಿ ನೀಡಿದರು.

ಒಬ್ಬ ಅಭ್ಯರ್ಥಿಯು 16 ಲಕ್ಷ ರೂ.ವರೆಗೆ ವೆಚ್ಚ ಮಾಡಬಹುದಾಗಿದೆ. ಕಾನೂನಾತ್ಮಕವಾಗಿ ಸಾರ್ವಜನಿಕ ಸಭೆ-ಸಮಾರಂಭ, ಬಿತ್ತಿಪತ್ರ, ಬ್ಯಾನರ್, ವಾಹನಗಳಿಗಾಗಿ ಖರ್ಚು ಮಾಡಬಹುದಾಗಿದೆ. ಆದರೆ ಹಣ, ಮದ್ಯ ಹಂಚುವುದು ನೀತಿ ಸಂಹಿತೆ ಉಲ್ಲಂಘನೆಯಾದಂತೆ ಎಂದು ಅವರು ಹೇಳಿದರು.

ವಿಡಿಯೊ ವೀಕ್ಷಣಾ ತಂಡ
ಮಡಿಕೇರಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪಿ.ಡಬ್ಲ್ಯು.ಡಿ. ಇಲಾಖೆಯ ತಾಂತ್ರಿಕ ಸಹಾಯಕ ಆರ್. ವಿನಯಕುಮಾರ್ (8904108679), ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದಿಂದ ವಿರಾಜಪೇಟೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಕೃಷ್ಣೇಗೌಡ (7259005545), ಮಡಿಕೇರಿ ವಿಧಾನ ಸಭಾ ಕ್ಷೇತ್ರದಿಂದ ಮಡಿಕೇರಿ ಆಹಾರ ಮತ್ತು ಸರಬರಾಜು ಇಲಾಖೆಯ ಉಪನಿರ್ದೇಶಕ ಎಸ್.ಸಿ.ಮಹದೇವಪ್ಪ (94480 11513), ಐ.ಟಿ.ಡಿ.ಪಿ.  ಯೋಜನಾಧಿಕಾರಿ ಎಲ್.ಜೆ.ಗಂಟಿ (9448185091).

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದಿಂದ ವಿರಾಜಪೇಟೆ ಪಿ.ಡಬ್ಲ್ಯ..ಡಿ. ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಸುರೇಶ್, ಮಡಿಕೇರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ಯೋಜನಾಧಿಕಾರಿ ಎಸ್.ಎನ್.ಕೃಷ್ಣೇಗೌಡ (9481186106).

ಸ್ಟಾಟಿಕ್ ಸರ್ವಿಲೆನ್ಸ್ ತಂಡ
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಬಿ.ಸುಬ್ರಹ್ಮಣ್ಯ (9448381183), ಮಡಿಕೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜೆ.ಎನ್.ನಾಗರಾಜ್ (9480869100), ಗೋಣಿಕೊಪ್ಪ ಎಪಿಎಂಸಿ ಕಾರ್ಯದರ್ಶಿ ಕೆ.ಆರ್. ಮರಿಗಂಗಯ್ಯ (9449629355), ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಲೆಕ್ಸಾಂಡರ್ (9480869110), ವಿರಾಜಪೇಟೆ ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎನ್.ಪಿ. ಉತ್ತಪ್ಪ (9480835590).

ಚೆಕ್‌ಪೋಸ್ಟ್ ತಂಡ: ಮಡಿಕೇರಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸೋಮವಾರಪೇಟೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಚ್.ಎಸ್. ರಾಜಶೇಖರ್ (9845985461), ಸೋಮವಾರ ಪೇಟೆ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್ (9480869105) ನಿಯೋಜಿಸಲಾಗಿದ್ದು ದೂರುಗಳಿದ್ದಲ್ಲಿ ತಮ್ಮ ವ್ಯಾಪ್ತಿಯ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.