ADVERTISEMENT

ಕಕ್ಕುಂದಕಾಡು: ವೆಂಕಟೇಶ್ವರ ದೇವಾಲಯ ಜಾತ್ರೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2012, 8:25 IST
Last Updated 12 ಏಪ್ರಿಲ್ 2012, 8:25 IST

ನಾಪೋಕ್ಲು: ಇಲ್ಲಿನ ಕಕ್ಕುಂದ ಕಾಡು ವೆಂಕಟೇಶ್ವರ ದೇವಾಲಯದ ವಾರ್ಷಿಕ ಜಾತ್ರೋತ್ಸವ ವಿಜೃಂಭಣೆಯಿಂದ ಜರುಗಿತು.

ಉತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಸೇವೆಗಳು ಜರುಗಿದವು. ಸೋಮವಾರ ಬೆಳಿಗ್ಗೆ ದೇವರ ನೃತ್ಯ ಕಾರ್ಯಕ್ರಮ ಜರುಗಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ನಡೆದ ದೇವರ ನೃತ್ಯ ಬಲಿಯನ್ನು ಭಕ್ತಾದಿಗಳು ವೀಕ್ಷಿಸಿದರು.
 
ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸಂಜೆ ದೇವರ ಉತ್ಸವ ಮೂರ್ತಿಯನ್ನು ವಾದ್ಯಗೋಷ್ಠಿಯೊಂದಿಗೆ ನಾಪೋಕ್ಲು ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು. ರಾತ್ರಿ ದೇವರ ನೃತ್ಯ ಹಾಗೂ ವಸಂತ ಪೂಜೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.