ADVERTISEMENT

‘ಕಾಂಗ್ರೆಸ್‌ನಿಂದ ಮಾತ್ರ ಸುಭದ್ರ ಸರ್ಕಾರ’

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2017, 6:32 IST
Last Updated 24 ಡಿಸೆಂಬರ್ 2017, 6:32 IST

ಕುಶಾಲನಗರ: ‘ದೇಶದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸುಭದ್ರ, ಜನಪರ ಹಾಗೂ ಪ್ರಗತಿಪರವಾದ ಆಡಳಿತ ನೀಡಲು ಸಾಧ್ಯ’ ಎಂದು ಐಎನ್‌ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಹೇಳಿದರು.

ಶಿರಂಗಾಲ ಗ್ರಾಮದಿಂದ ಕುಶಾಲನಗರದವರೆಗೆ ಭಾರತೀಯ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ (ಐಎನ್‌ಟಿಯುಸಿ) ವತಿಯಿಂದ ಶುಕ್ರವಾರ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಆಯೋಜಿಸಿದ್ದ ಜಾಥಾ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ತುಳಿತಕ್ಕೆ ಒಳಗಾದ ಹಾಗೂ ಅವಕಾಶವಂಚಿತರಾದ ಜನತೆಯ ಒಳಿತಿಗಾಗಿ ಕಾಂಗ್ರೆಸ್ ಸರ್ಕಾರ ಬಹುಮುಖಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಗಳು ಬಡವರ ಬದುಕಿನಲ್ಲಿ ಭರವಸೆಗಳನ್ನು ಮೂಡಿಸಿವೆ ಎಂದರು.

ADVERTISEMENT

‘ಕೊಡಗಿನಲ್ಲಿ ಶಾಂತಿ, ನೆಮ್ಮದಿ ಹಾಗೂ ಸಹಭಾಳ್ವೆಗಾಗಿ ಜನತೆ ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ಜಾತಿ, ಧರ್ಮದ ಹೆಸರನ್ನು ಮುಂದಿಟ್ಟುಕೊಂಡು ಕೋಮು ಸಂಘರ್ಷ ಸೃಷ್ಟಿಸಿ ರಾಜಕೀಯ ಮಾಡುವ ಪಕ್ಷವನ್ನು ತಿರಸ್ಕರಿಸಬೇಕು’ ಎಂದು ನಾಪಂಡ ಮುತ್ತಪ್ಪ ಹೇಳಿದರು.

ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಪಿ.ಸಿ.ಹಸೈನರ್ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಮತದಾರರಿಗೆ ನೀಡಿದ ಭರವಸೆಯನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದ ಸರ್ಕಾರವಾಗಿದೆ ಎಂದರು. ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಯಾಕೂಬ್ ಮಾತನಾಡಿದರು.

ಈ ಸಂದರ್ಭ ಜಿ.ಪಂ.ಸದಸ್ಯ ಸುನೀತಾ, ತಾ.ಪಂ.ಸದಸ್ಯರಾದ ಅನಂತಕುಮಾರ್, ಅಪ್ರು ಮೋಹನ್, ಜಿಲ್ಲಾ ಕಾಂಗ್ರೆಸ್ ಕೋಶಾಧ್ಯಕ್ಷ ವಿ.ಪಿ.ಸುರೇಶ್, ವಕ್ತಾರ ಪಪ್ಪು ತಿಮ್ಮಯ್ಯ, ಐ.ಎನ್.ಟಿ.ಸಿ.ಮಹಿಳಾ ಘಟಕದ ಅಧ್ಯಕ್ಷ ಗೀತಾಧರ್ಮಪ್ಪ, ಜಿ.ಪಂ.ಮಾಜಿ ಉಪಾಧ್ಯಕ್ಷರ ರಾಜಮ್ಮರುದ್ರಯ್ಯ, ಐ.ಎನ್.ಟಿ.ಯು.ಸಿ.ರಾಜ್ಯ ಪ್ರಧಾನ ಕಾರ್ಯದರ್ಶಿ ನಾಪಂಡ ಮುದ್ದಪ್ಪ, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಟಿ.ಪಿ.ಹಮೀದ್, ಕಾಂಗ್ರೆಸ್ ಮುಖಂಡ ವಿರೂಪಾಕ್ಷಯ್ಯ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.