ಸೋಮವಾರಪೇಟೆ: ತಾಲ್ಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ನಗರಳ್ಳಿ ಗ್ರಾಮದ ಸೇತುವೆಯ ಒಂದು ಪಾರ್ಶ್ವ ಕುಸಿಯತೊಡಗಿದ್ದು ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ನಗರಳ್ಳಿ ಗ್ರಾಮದಿಂದ ತಂಬಳಗೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಏಕೈಕ ಸೇತುವೆ ಇದಾಗಿದ್ದು 2010 ರಲ್ಲಿ ಜಿಲ್ಲಾ ಪಂಚಾಯತಿ ವತಿಯಿಂದ ರೂ.5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಇದೀಗ ಮಳೆಗೆ ಸೇತುವೆಯ ಒಂದು ತುದಿ ಕುಸಿದು ಹೊಂಡ ನಿರ್ಮಾಣಗೊಂಡಿದೆ. ಹೀಗಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಈ ರಸ್ತೆಯಲ್ಲಿ ಸಾರ್ವಜನಿಕರು ಸೇರಿದಂತೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಸಂಚಾರಕ್ಕೆ ಇದೇ ಸೇತುವೆ ಅವಲಂಬಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.