ADVERTISEMENT

ಕೊಡಗು ಸೈನಿಕ ಶಾಲೆ ಕಟ್ಟಡ ಲೋಕಾರ್ಪಣೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2012, 7:10 IST
Last Updated 19 ಡಿಸೆಂಬರ್ 2012, 7:10 IST

ಕುಶಾಲನಗರ: ರಾಜ್ಯದ ಎರಡನೆ ಸೈನಿಕ ಶಾಲೆ ಎಂಬ ಹೆಗ್ಗಳಿಕೆ ಹೊಂದಿರುವ ಸಮೀಪದ ಕೂಡಿಗೆಯಲ್ಲಿರುವ ಕೊಡಗು ಸೈನಿಕ ಶಾಲೆಯ ನೂತನ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಕಟ್ಟಡವನ್ನು ಮಂಗಳವಾರ ಮುಖ್ಯಮಂತ್ರಿ ಜಗದೀಶ ಶೆಟ್ಟರ ಲೋಕಾರ್ಪಣೆಗೊಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 2007ರಲ್ಲಿ ಕೂಡಿಗೆಯ ಕೃಷಿ ಇಲಾಖೆಗೆ ಸೇರಿದ ಆವರಣ ದಲ್ಲಿ ಆರಂಭಗೊಂಡ ಸೈನಿಕ ಶಾಲೆಯಲ್ಲಿ ಮೊದಲ ಹಂತದಲ್ಲಿ ರೂ.30 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಕಟ್ಟಡ ಉದ್ಘಾಟನೆ ಮತ್ತು ಎರಡನೇ ಹಂತದ ಅಭಿವೃದ್ಧಿ ಕಾರ್ಯಕ್ರಮಕ್ಕೆ ಮುಖ್ಯ ಮಂತ್ರಿ ಜಗದೀಶ್ ಶೆಟ್ಟರ್ ಶಂಕು ಸ್ಥಾಪನೆ ನೆರವೇರಿಸಿದರು.

ನಂತರ ಸಮಾರಂಭವನ್ನು ಉದ್ದೇ ಶಿಸಿ ಮಾತನಾಡಿದ ಅವರು, ವೀರ ಸೇನಾನಿಗಳ ಬೀಡಾದ ಕೊಡಗಿನಲ್ಲಿ ಸೈನಿಕ ಶಾಲೆ ಸ್ಥಾಪನೆಯಾಗಬೇಕೆಂಬ ಬೇಡಿಕೆ ಈಡೇರಿದೆ. ಈ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುವ ವಿದ್ಯಾರ್ಥಿಗಳು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸೈನಿಕ ಶಾಲೆಯ ವಿದ್ಯಾರ್ಥಿಗಳು ಶಿಸ್ತು - ಸಂಯಮ, ರಾಷ್ಟ್ರಪ್ರೇಮ, ಭಾವೈಕ್ಯತೆ ಮೈಗೂಡಿಸಿಕೊಳ್ಳುವ ಮೂ ಲಕ ದೇಶ ರಕ್ಷಣಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು.

ಸೈನಿಕ ಶಾಲೆಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ವತಿಯಿಂದ ಅಗತ್ಯ ನೆರವು ನೀಡುವುದಾಗಿ ಶೆಟ್ಟರ್ ಭರವಸೆ ನೀಡಿದರು.
ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಮಾತ ನಾಡಿ, ಕೊಡಗು ಜಿಲ್ಲೆಯಲ್ಲಿ ಸೈನಿಕ ಶಾಲೆ ಸ್ಥಾಪನೆ ಮಾಡಬೇಕೆಂದು ವಿಧಾನ ಸಭೆಯಲ್ಲಿ 23 ಬಾರಿ ಪ್ರಶ್ನೆಯನ್ನು ಕೇಳಿದ್ದೆ. ನಂತರ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ   ಯಡಿಯೂ ರಪ್ಪ  ಅವರು ರೂ.35 ಕೋಟಿ ಅನುದಾನವನ್ನು ಒದಗಿಸುವ ಮೂಲಕ ಸೈನಿಕ ಶಾಲೆ ಸ್ಥಾಪನೆಯಾಗಲು ಕಾರಣರಾದರು ಎಂದರು.

ಸೈನಿಕ ಶಾಲೆಯ ಅಭಿವೃದ್ಧಿ ಮುಖ್ಯಮಂತ್ರಿಗಳು ರೂ.8 ಕೋಟಿ ಅನುದಾನವನ್ನು ಒದಗಿಸಿದ್ದು, ಮುಂದಿನ ದಿನಗಳಲ್ಲಿಯೂ ಶಾಲೆಯ ಅಭಿವೃದ್ಧಿಗೆ ನೆರವು ನೀಡಲಾಗುವುದು ಎಂದರು.

ಕೆಡೆಟ್‌ಗಳು ತಮ್ಮ ಜೀವನದಲ್ಲಿ ಶಿಸ್ತು , ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಯನ್ನು ಮೈಗೂಡಿಸಿಕೊಂಡು ಎನ್‌ಡಿಎ, ಐಎಂಎ, ಐಎಎಸ್, ಐಪಿಎಸ್ ನಂತರ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ದೇಶದ ರಕ್ಷಣಾ ಕ್ಷೇತ್ರದಲ್ಲಿ ತೊಡಗಿಸಿ ಕೊಳ್ಳಬೇಕು ಎಂದು ರಂಜನ್ ಹೇಳಿದರು.
ಪ್ರಾಸ್ತಾವಿಕಶ್ರಿವಾಗಿ ಮಾತನಾಡಿದ ಸೈನಿಕ ಶಾಲೆಯ ಪ್ರಾಂಶುಪಾಲ ಕ್ಯಾಪ್ಟ ನ್ ಎಂ.ಟಿ.ರಮೇಶ್ ಅವರು ಸೈನಿಕ ಶಾಲೆ ಅಭಿವೃದ್ಧಿಗೆ ಸರ್ಕಾರ ನೀಡುತ್ತಿ ರುವ ಸಹಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಧಾನಸಭಾಧ್ಯಕ್ಷ ಕೆ.ಜಿ. ಬೋಪ ಯ್ಯ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಶಿವಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಅರೆಯೂರು ಜಯಣ್ಣ, ಜಿಲ್ಲಾಧಿಕಾರಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಅಣ್ಣೆಗೇರಿ, ಜಿಲ್ಲಾ ಪಂಚಾಯಿತಿ ಸಿಇಒ ಆಂಜನಪ್ಪ, ಸೈನಿಕ ಶಾಲೆ ಮುಖ್ಯಶಿಕ್ಷಕ ಖಾನ್, ಹಿರಿಯ ಶಿಕ್ಷಕ ಆರೋಗ್ಯ ರಾಜ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.