ADVERTISEMENT

ಗಡಿಗ್ರಾಮಗಳಲ್ಲಿ ಬಿರುಸಿನ ಮತಯಾಚನೆ

​ಪ್ರಜಾವಾಣಿ ವಾರ್ತೆ
Published 4 ಮೇ 2018, 10:32 IST
Last Updated 4 ಮೇ 2018, 10:32 IST

ಕುಶಾಲನಗರ: ಸಮೀಪದ ಹೆಬ್ಬಾಲೆ ಗ್ರಾಮದಲ್ಲಿ ಈಚೆಗೆ ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರಂಜನ್ ಮತಯಾಚನೆ ಮಾಡಿದರು.

ತಾಲ್ಲೂಕಿನ ಗಡಿಗ್ರಾಮಗಳಾದ ಶಿರಂಗಾಲ, ತೊರೆನೂರು, ಸಿದ್ದಲಿಂಗಪುರು, ಅಳುವಾರ, ಮಣಜೂರು ಗ್ರಾಮಗಳಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮನೆಮನೆಗೆ ತೆರಳಿ ಮತಯಾಚಿಸಿದರು.

ನಂತರ ನಡೆದ ಸಭೆಯಲ್ಲಿ ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅದೇ ರೀತಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಾರಿಗೊಳಿಸುತ್ತಿರುವ ಯೋಜನೆಗಳು ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಿವೆ ಎಂದರು.

ಪಕ್ಷದ ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಿ ಬಿಜೆಪಿ ಸರ್ಕಾರದ ಸಾಧನೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿ.ಪಂ. ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಆರ್.ಶ್ರೀನಿವಾಸ್, ಮುಖಂಡರಾದ ವಿ.ಎಂ.ವಿಜಯ್, ಜ್ಯೋತಿಶಿವಣ್ಣ, ಎಚ್.ಎಸ್.ರಾಜಶೇಖರ್, ಎನ್.ಎನ್.ಧರ್ಮಪ್ಪ, ಎಚ್ಎಚ್.ಸುಂದರ್, ಎಚ್.ಎಸ್.ರಾಜಶೇಖರ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.