ADVERTISEMENT

‘ಜಿಲ್ಲೆಯ ಹಿತಕ್ಕಾಗಿ ಕಾಂಗ್ರೆಸ್‌ ತಿರಸ್ಕರಿಸಿ’

​ಪ್ರಜಾವಾಣಿ ವಾರ್ತೆ
Published 6 ಮೇ 2018, 11:38 IST
Last Updated 6 ಮೇ 2018, 11:38 IST

ಗೋಣಿಕೊಪ್ಪಲು: ‘ಜಿಲ್ಲೆಗೆ ದೌರ್ಭಾಗ್ಯ ಗಳ ಕೊಡುಗೆ ನೀಡಿದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತಿರಸ್ಕರಿ ಸುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯ’ ಎಂದು ಕೇಂದ್ರ ಸಚಿವ ಬಿ.ವಿ. ಸದಾನಂದಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ಕುಟ್ಟ, ಶ್ರೀಮಂಗಲ ಬಿಜೆಪಿ ಸ್ಥಾನೀಯ ಸಮಿತಿ ಮತಯಾಚನೆಯ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು. ‘ಅನ್ನಭಾಗ್ಯ, ಕ್ಷೀರಭಾಗ್ಯ ಎಂದು ಹೇಳುತ್ತಾ ಕಾಂಗ್ರೆಸ್ ಸರ್ಕಾರ 5 ವರ್ಷ ಆಡಳಿತದಲ್ಲಿ ಕೊಡಗು ಜಿಲ್ಲೆಗೆ ನೀಡಿರುವುದು ದುರಂತ ಭಾಗ್ಯಗಳಷ್ಟೇ. ಟಿಪ್ಪು ಜಯಂತಿ ಆಚರಣೆ, ಡಿವೈಎಸ್ಪಿ ಗಣಪತಿ ಆತ್ಮಹತ್ಯೆ, ಕುಟ್ಟಪ್ಪ ಹತ್ಯೆ ಸೇರಿದಂತೆ ಹಿಂದೂ ಕಾರ್ಯಕರ್ತರ ಹತ್ಯೆ ಯೋಜನೆಗಳ ಭಾಗ್ಯವೇ ಜಿಲ್ಲೆಗೆ ಸಿದ್ದರಾಮಯ್ಯ ಸರ್ಕಾರ ನೀಡಿದೆ’ ಎಂದು ದೂರಿದರು.

ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದಿರುವ ಗೂಂಡಾಗಳನ್ನು ಬಿಡುಗಡೆ ಮಾಡಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ. ಕೇಂದ್ರ ಸರ್ಕಾರದ ಹಲವು ಯೋಜನೆಗಳನ್ನು ತಮ್ಮದು ಎಂದು ಸುಳ್ಳು ಹೇಳುತ್ತಾ ಪ್ರಚಾರ ಪಡೆಯುತ್ತಿರುವ ಸಿದ್ದರಾಮಯ್ಯ ಸರ್ಕಾರ ಬಡವರಿಗೆ ನೀಡುವ ಅನ್ನಭಾಗ್ಯಕ್ಕೆ ಕೇಂದ್ರ ಸರ್ಕಾರ ನೀಡುವ ಅನುದಾನವನ್ನು ಸಿದ್ದರಾಮಯ್ಯ ಹೈಜಾಕ್ ಮಾಡಿದ್ದಾರೆ ಎಂದು ದೂರಿದರು.

ADVERTISEMENT

ಮುಖಂಡರಾದ ಕಾಂತಿ ಸತೀಶ್, ಉಪಾಧ್ಯಕ್ಷ ರಾಬಿನ್ ದೇವಯ್ಯ, ತಾಲ್ಲೂಕು ಅಧ್ಯಕ್ಷೆ ಸುಮಿ ಸುಬ್ಬಯ್ಯ, ತಾಲ್ಲೂಕು ಬಿಜೆಪಿ. ಯುವ ಮೋರ್ಚಾ  ಅಧ್ಯಕ್ಷ ಕುಟ್ಟಂಡ ಅಜಿತ್ ಕರುಂಬಯ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.