ADVERTISEMENT

ತಾಲ್ಲೂಕು ಕಚೇರಿಗೆ ರೈತರ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 19:30 IST
Last Updated 1 ಅಕ್ಟೋಬರ್ 2012, 19:30 IST

ಸೋಮವಾರಪೇಟೆ: ತಾಲ್ಲೂಕಿನಲ್ಲಿರುವ `ಸಿ~ ಮತ್ತು `ಡಿ~ ಜಾಗಗಳನ್ನು ಕೂಡಲೇ ಸಕ್ರಮಗೊಳಿಸುವಂತೆ ಒತ್ತಾಯಿಸಿ  ತಾಲ್ಲೂಕು ರೈತ ಹೋರಾಟ ಸಮಿತಿ ವತಿಯಿಂದ ತಾಲ್ಲೂಕು ಕಚೇರಿಗೆ ಸೋಮವಾರ ಮುತ್ತಿಗೆ ಹಾಕಲಾಯಿತು.

ರೈತ ಹೋರಾಟ ಸಮಿತಿ ಅಧ್ಯಕ್ಷ ಕೆ.ಎಂ.ಲೋಕೇಶ್ ಮಾತನಾಡಿ, ತಾಲ್ಲೂಕಿನಲ್ಲಿ ರೈತರು ಹಲವು ದಶಕಗಳಿಂದ ಬೇಸಾಯ ಮಾಡಿಕೊಂಡು ಬರುತ್ತಿರುವ ಪ್ರದೇಶವನ್ನು `ಸಿ~ ಮತ್ತು `ಡಿ~ ಜಾಗವೆಂದು ಅರಣ್ಯ ಇಲಾಖೆ ವರದಿ ನೀಡಿರುವ ಕಾರಣ ಸರ್ಕಾರದಿಂದ ಯಾವುದೇ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದರು.

ಜಾಗ ಸಕ್ರಮಗೊಳಿಸಲು ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ.  6 ಸಾವಿರ ಅರ್ಜಿ ತಾಲ್ಲೂಕು ಕಚೇರಿಯಲ್ಲಿ ಉಳಿದಿವೆ. ತಿಂಗಳ ಒಳಗಾಗಿ ಅರ್ಜಿ ವಿಲೇವಾರಿ ಮಾಡದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಶಿರಸ್ತೇದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ತಾಲ್ಲೂಕು ರೈತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಬನ್ನಳ್ಳಿ ಸತೀಶ್, ರೈತ ಸಂಘದ  ಉದಯಕುಮಾರ್, ಎಚ್.ಪಿ.ಕೊಮಾರಪ್ಪ, ಲೋಕೇಶ್, ಸತೀಶ್, ವಿ.ಎ.ಲಾರೆನ್ಸ್, ಬಿ.ಜಿ.ಇಂದ್ರೇಶ್, ಕೊಡ್ಲಿಪೇಟೆಯ ಅಬ್ಬಾಸ್  ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.