ADVERTISEMENT

`ಪಠ್ಯೇತರ ಚಟುವಟಿಕೆಯಿಂದ ಶೈಕ್ಷಣಿಕ ಪ್ರಗತಿ'

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2012, 8:04 IST
Last Updated 28 ಡಿಸೆಂಬರ್ 2012, 8:04 IST
ಮಡಿಕೇರಿಯ ಕಾವೇರಿ ಕಲಾಕ್ಷೇತ್ರದಲ್ಲಿ ಗುರವಾರ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳು ಪೌರಾಣಿಕ ನಾಟಕ ಪ್ರದರ್ಶಿಸಿದರು.
ಮಡಿಕೇರಿಯ ಕಾವೇರಿ ಕಲಾಕ್ಷೇತ್ರದಲ್ಲಿ ಗುರವಾರ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳು ಪೌರಾಣಿಕ ನಾಟಕ ಪ್ರದರ್ಶಿಸಿದರು.   

ಮಡಿಕೇರಿ: ಶಾಲೆಗಳಲ್ಲಿ ಪಠ್ಯೇತರ ಚಟುವಟಿಕೆಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಬೆಳವಣಿಗೆ ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ. ಶಿವಪ್ಪ ಅವರು ಅಭಿಪ್ರಾಯಪಟ್ಟರು.

ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಗುರುವಾರ ನಡೆದ ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆಯ ಶಾಲಾ ವಾರ್ಷಿ ಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಮಕ್ಕಳಿಗೆ ವರ್ಷ ಪೂರ್ತಿ ನಡೆಯುವ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಈ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ನಡೆಸುವ ಮೂಲಕ ಹಲವು ಬದಲಾವಣೆ ತರಲು ಸಾಧ್ಯ ಎಂದರು.

ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಕಾಂತಿ ಬೆಳ್ಳಿಯಪ್ಪ ಮಾತನಾಡಿ, ಶಾಲೆಗಳಲ್ಲಿ ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ನೈತಿಕ ಪಾಠ ಹೇಳಿಕೊಡಬೇಕು. ಈ ಮೂಲಕ ಯುವ ಜನತೆಯಿಂದ ಉತ್ತಮ ಸಮಾಜದ ಬೆಳೆವಣಿಗೆ ಸಾಧ್ಯ ಎಂದರು.
ನಗರಸಭೆ ಅಧ್ಯಕ್ಷ ಎಚ್. ಎಂ. ನಂದಕುಮಾರ್ ಮಾತನಾಡಿ, ಕನ್ನಡ  ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಯಾವುದೇ ಕೀಳರಿಮೆ ಬೇಡ. ವಿದ್ಯಾರ್ಥಿಗಳು ಉತ್ತಮ ಅಭ್ಯಾಸ ನಡೆಸಿದರೇ ಎಲ್ಲರಿಗೂ ಹಲವು ಅವಕಾಶಗಳಿವೆ ಸಿಗುತ್ತವೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಇಂದು ಸಮಾಜದಲ್ಲಿ ನಾನಾ ಪಿಡುಗುಗಳಿಗೆ ಯುವ ಜನತೆಯನ್ನು ಬಲಿಯಾಗುತ್ತಿದ್ದು, ಈ ಬಗ್ಗೆ ಪೋಷಕರು ಗಮನ ಹರಿಸಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ವ್ಯಕ್ತಿಯ ಬೆಳವಣಿಗೆಯ ಜೊತೆಗೆ ಉತ್ತಮ ಸಮಾಜದ ಅಭಿವೃದ್ಧಿ ಸಾಧ್ಯ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಚ್. ಬವರಾಜು, ವಿದ್ಯಾಸಂಸ್ಥೆಯ ಅಧ್ಯಕ್ಷ ಎಚ್.ಎಸ್. ಗೋವಿಂದರಾಜ್, ಪೊನ್ನಂಪೇಟೆ ಅರಣ್ಯ ಕಾಲೇಜಿನ ಪ್ರೋಫೆಸರ್ ಡಾ.ಎಚ್.ಎಸ್. ವಾಸುದೇವ್ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.