ADVERTISEMENT

‘ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ’

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2018, 12:16 IST
Last Updated 2 ಏಪ್ರಿಲ್ 2018, 12:16 IST

ವಿರಾಜಪೇಟೆ: ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವವರನ್ನು ಸಮಾಜ ಸದಾ ಗೌರವಿಸುತ್ತದೆ ಎಂದು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ವಿಶ್ವನಾಥ್ ಸಿಂಪಿ ಹೇಳಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿವೃತ್ತರಾದ ನೌಕರ ಎಚ್.ಆರ್ ಬನ್ನಾರಿ ಅವರಿಗೆ ಶನಿವಾರ ಆಸ್ಪತ್ರೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನಿಸಿ ಅವರು ಮಾತನಾಡಿದರು.ಸರ್ಕಾರಿ ನೌಕರರು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದುವುದರೊಂದಿಗೆ ನಿಷ್ಠೆಯಿಂದ ಸೇವೆ ಸಲ್ಲಿಸಬೇಕು ಎಂದರು.ಈ ಸಂದರ್ಭ ಡಾ.ಆನಂದ್, ಡಾ.ಹೇಮಪ್ರಿಯಾ, ಹಿರಿಯ ಶುಶ್ರೂಷಕಿಯರಾದ ಧಮಯಂತಿ, ಧನಲಕ್ಷ್ಮಿ ಸೇರಿದಂತೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.