ADVERTISEMENT

ಬನಶಂಕರಿ ದೇವಿ ಉತ್ಸವಕ್ಕೆ ವರ್ಣರಂಜಿತ ತೆರೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2017, 8:27 IST
Last Updated 24 ನವೆಂಬರ್ 2017, 8:27 IST
ಕುಶಾಲನಗರ ಸಮೀಪದ ಹೆಬ್ಬಾಲೆ ಗ್ರಾಮದಲ್ಲಿ ಗ್ರಾಮದೇವತೆ ಬನಶಂಕರಿ ಉತ್ಸವ ಹಾಗೂ ಗ್ರಾಮೋತ್ಸವದ ಸಮಾರೋಪ ಸಮಾರಂಭವನ್ನು ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಆರ್.ಶ್ರೀನಿವಾಸ್ ಉದ್ಘಾಟಿಸಿದರು
ಕುಶಾಲನಗರ ಸಮೀಪದ ಹೆಬ್ಬಾಲೆ ಗ್ರಾಮದಲ್ಲಿ ಗ್ರಾಮದೇವತೆ ಬನಶಂಕರಿ ಉತ್ಸವ ಹಾಗೂ ಗ್ರಾಮೋತ್ಸವದ ಸಮಾರೋಪ ಸಮಾರಂಭವನ್ನು ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಆರ್.ಶ್ರೀನಿವಾಸ್ ಉದ್ಘಾಟಿಸಿದರು   

ಕುಶಾಲನಗರ: ಹೆಬ್ಬಾಲೆ ಗ್ರಾಮದಲ್ಲಿ ಐದು ದಿನ ನಡೆದ ಗ್ರಾಮ ದೇವತೆ ಬನಶಂಕರಿ ಅಮ್ಮನವರ ವಾರ್ಷಿಕ ಹಬ್ಬ, ಜಾತ್ರೋತ್ಸವ ಹಾಗೂ ಗ್ರಾಮೋತ್ಸವಕ್ಕೆ ಮಂಗಳವಾರ ವರ್ಣರಂಜಿತ ತೆರೆ ಬಿದ್ದಿತು.

ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಜಿ.ಪಂ. ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಆರ್.ಶ್ರೀನಿವಾಸ್, ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಹಬ್ಬ ಹರಿದಿನಗಳು ಪರಸ್ಪರ ಪ್ರೀತಿ, ವಾತ್ಸಲ್ಯ ಹಾಗೂ ಸೌಹಾರ್ದವನ್ನು ಬೆಸೆಯುತ್ತವೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಉದ್ಯಮಿ ಆರ್.ಆರ್.ಕುಮಾರ್, ಗ್ರಾಮದಲ್ಲಿ ಎಲ್ಲ ಜನರು ಒಟ್ಟಾಗಿ ಗ್ರಾಮ ದೇವತೆ ಬನಶಂಕರಿ ದೇವಿ ಹಬ್ಬವನ್ನು ಆಚರಿಸಿಕೊಂಡು ಬರುತ್ತಿರುವುದು ಸಂತೋಷಕರ. ಇದರಿಂದ ಗ್ರಾಮವು ಸವರ್ತೋಮುಖ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ADVERTISEMENT

ಮಾದರಿ ಯುವಕ ಸಂಘದ ಅಧ್ಯಕ್ಷ ಎಚ್.ಎಸ್.ಪ್ರವೀಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ಅಧ್ಯಕ್ಷೆ ಲತಾ ಸತೀಶ್, ಉಪಾಧ್ಯಕ್ಷೆ ಪದ್ಮಾ, ಶಿರಂಗಾಲ ಗ್ರಾ.ಪಂ. ಅಧ್ಯಕ್ಷ ಎನ್.ಎಸ್.ರಮೇಶ್, ತೊರೆನೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಟಿ.ದಿನೇಶ್, ನಿರ್ದೇಶಕರಾದ ಎಸ್.ಎಸ್.ಚಂದ್ರಶೇಖರ್, ಟಿ.ಬಿ.ಜಗದೀಶ್, ಐಎನ್‌ಟಿಯುಸಿ ಮುಖಂಡ ಉದಯ, ಮಹೇಶ್, ಪುಟ್ಟೆಗೌಡ, ಶಿಕ್ಷಕರಾದ ಎಚ್.ಎನ್.ಮಂಜುನಾಥ್, ಕುಮಾರ್, ಪ್ರಸನ್ನ, ಚೇತನ ಉಪಸ್ಥಿತರಿದ್ದರು. ಭದ್ರಾವತಿಯ ತೃಪ್ತಿ ಮೆಲೋಡಿ ಆರ್ಕೆಸ್ಟ್ರಾ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.