ಮಡಿಕೇರಿ: ಕ್ಷುಲಕ ಕಾರಣಕ್ಕೆ ಪತ್ನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಮಡಿಕೇರಿಯಲ್ಲಿ ಮಂಗಳವಾರ ನಡೆದಿದೆ.
ನಗರದ ರೇಸ್‌ಕೋರ್ಸ್ ರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಪ್ರವೀಣ್ ಕುಮಾರ್ ಹಾಗೂ ಅವರ ಪತ್ನಿ ಶೈಲಜಾ ಅವರ ನಡುವೆ ಜಗಳ ನಡೆದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಪ್ರವೀಣ್‌ಕುಮಾರ್ ಚಾಕು ವಿನಿಂದ ಇರಿದು ನನ್ನನ್ನು ಗಾಯಗೊಳಿಸಿದ್ದಾರೆಂದು ಶೈಲಜಾ ಅವರು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.