ಸೋಮವಾರಪೇಟೆ: ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಸೇರಲು ಅವರಿಗೆ ಕಾನೂನಿನ ಅರಿವು ಮುಖ್ಯ ಎಂದು ಸಿವಿಲ್ ನ್ಯಾಯಾಧೀಶ ನಾಗೇಶ್ ಕೆ.ಮೊಗೇರ ಹೇಳಿದರು.
ತಾ.ಪಂ. ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾ ಚರಣೆ ಪ್ರಯುಕ್ತ ಏರ್ಪಡಿಸಿದ್ದ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರಿಗೆ ಸಂವಿಧಾನದತ್ತ ವಾಗಿ ನೀಡಬೇಕಾದ ಸೌಲಭ್ಯಗಳನ್ನು ಒದಗಿಸಲು ಜನಪ್ರತಿನಿಧಿಗಳು ಮನಸ್ಸು ಮಾಡಬೇಕು. ಇಂದಿಗೂ ಮಹಿಳೆಯರು ತಮ್ಮ ಹಕ್ಕುಗಳಿಂದ ವಂಚಿತರಾಗು ತ್ತಿದ್ದಾರೆ. ಸ್ತ್ರೀಯರಿಗೆ ಕಾನೂನಿನ ಅರಿವು ಮೂಡಿಸುವುದರ ಜೊತೆಗೆ ಅಗತ್ಯವಾದ ನೆರವನ್ನೂ ಕೂಡಾ ನೀಡಬೇಕಾಗಿದೆ ಎಂದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಬಿ.ವರದರಾಜ್ ಮಾತನಾಡಿ, ಸರ್ಕಾರ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿದ್ದು, ಆಡಳಿತದಲ್ಲೂ ಮಹಿಳೆ ಯರು ಸಕ್ರಿಯರಾಗಬೇಕು. ಗ್ರಾಮ ಮಟ್ಟದಲ್ಲಿ ಮಹಿಳೆಯರು ಸಂಘಟಿತ ರಾಗಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವಿ.ಕೆ.ಲೋಕೇಶ್ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಚ್.ಎಸ್.ಬಲರಾಂ, ಜಿಲ್ಲಾ ಪಂಚಾ ಯಿತಿ ಸದಸ್ಯೆ ಎನ್.ಎಸ್.ಗೀತಾ, ತಾಲ್ಲೂಕು ಪಂಚಾಯಿತಿ ಸದಸ್ಯರು ಗಳಾದ ಪವಿತ್ರ ದೇವೇಂದ್ರ, ಜ್ಯೋತಿ ಶಿವಣ್ಣ, ಪೂರ್ಣಿಮಾ ಗೋಪಾಲ್ ಸೇರಿದಂತೆ ವಿವಿಧ ಗ್ರಾ.ಪಂ.ಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯಶೋದಾ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.