ADVERTISEMENT

ಯೋಜನೆಗಳು ಸದ್ಬಳಕೆಯಾಗಲಿ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2017, 7:18 IST
Last Updated 28 ಅಕ್ಟೋಬರ್ 2017, 7:18 IST

ವಿರಾಜಪೇಟೆ: ಯೋಜನೆಗಳ ಸದ್ಬಳಕೆಯಾದಾಗ ಮಾತ್ರ ಶೋಷಿತ ವರ್ಗಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ವಿಜು ಸುಬ್ರಮಣಿ ಅಭಿಪ್ರಾಯಪಟ್ಟರು.

ತಾಲ್ಲೂಕು ಅಡಳಿತ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ಬಿಳುಗುಂದ ಗ್ರಾಮ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಬಿಳುಗುಂದದಲ್ಲಿ ಈಚೆಗೆ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮದ ಅಂಗವಾಗಿ ನಡೆದ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶೋಷಿತ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಮಾಡಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಇದ್ದಲ್ಲಿ ಶೋಷಿತ ವರ್ಗದ ಸಮುದಾಯಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ADVERTISEMENT

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್‌, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎನ್.ಮಂಜುನಾಥ್ ಪ್ರಸ್ತಾವಿಕವಾಗಿ ಮಾತನಾಡಿದರು. ಬಿಳುಗುಂದ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೆ.ಎ. ಅಲೀಮ, ಗ್ರಾಮ ಪಂಚಾಯಿತಿ ಸದಸ್ಯ ಹನೀಫ, ವಕೀಲರಾದ ಕೆ.ವಿ. ಸುನೀಲ್ ಹಾಗೂ ರಫೀಕ್ ನವಲಗುಂದ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಸದಸ್ಯೆ ಎಚ್.ಎಸ್. ಶೋಭಾ, ಬಿಳುಗುಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಾಂತಿ, ಸದಸ್ಯರಾದ ಚಿಲ್ಲವಂಡ ಕಾವೇರಪ್ಪ, ಪ್ರವೀಣ್, ಕುಸುಮಾ ಹಾಗೂ ಎಚ್.ಎಸ್. ಕುಟ್ಟಪ್ಪ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.