ADVERTISEMENT

ರಸ್ತೆ ದುರಸ್ತಿಗೆ ಒತ್ತಾಯಿಸಿ ದಿಢೀರ್‌ ರಸ್ತೆತಡೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2017, 6:48 IST
Last Updated 3 ಡಿಸೆಂಬರ್ 2017, 6:48 IST

ವಿರಾಜಪೇಟೆ: ವೈಜ್ಞಾನಿಕ ಹಾಗೂ ಸಮರ್ಪಕವಾಗಿ ರಸ್ತೆ ಕಾಮಗಾರಿ ಕೈಗೊಂಡಿಲ್ಲ ಎಂದು ಆರೋಪಿಸಿ ಸಮೀಪದ ಬೇರಳಿನಾಡು ಹಾಗೂ ಕುತ್ತುನಾಡು ಗ್ರಾಮಸ್ಥರು ಶುಕ್ರವಾರ ದಿಢೀರ್ ರಸ್ತೆ ತಡೆ ನಡೆಸಿದರು.

ಸಮೀಪದ ಬಿಟ್ಟಂಗಾಲದಿಂದ ಕುಟ್ಟಂದಿಯವರೆಗಿನ ಸುಮಾರು 2.5 ಕಿ.ಮೀ ಉದ್ದದ ರಸ್ತೆಯ ವಿಸ್ತರಣೆ ಹಾಗೂ ಡಾಂಬರೀಕರಣ ಕಾಮಗಾರಿಯನ್ನು ₹ 1,65,00,000 ವೆಚ್ಚದಲ್ಲಿ ಕೈಗೊಳ್ಳಲಾಗಿತ್ತು. ಆದರೆ ಕೆಲವು ಭಾಗದಲ್ಲಿ ಸೂಕ್ತ ಪ್ರಮಾಣದಲ್ಲಿ ರಸ್ತೆ ವಿಸ್ತರಣೆ ಆಗಿಲ್ಲ. ವೈಜ್ಞಾನಿಕವಾಗಿಯೂ ಕಾಮಗಾರಿ ನಡೆಸಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡು, ಸಮರ್ಪಕ ಕಾಮಗಾರಿ ನಡೆಸಲು ಒತ್ತಾಯಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಎ.ಭವ್ಯಾ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಉಮೇಶ್‌, ಗ್ರಾಮಸ್ಥರಾದ ಕೋಲತಂಡ ರಘು ಮಾಚಯ್ಯ, ಕೊಲ್ಲಿರ ಉಮೇಶ್, ಲಾಲ ಭೀಮಯ್ಯ, ಎ.ರಂಜಿ ಪೂಣಚ್ಚ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.