ADVERTISEMENT

ರೂ 50 ಲಕ್ಷದ ಕ್ರಿಯಾ ಯೋಜನೆ ರೂಪಿಸಲು ನಿರ್ಣಯ

​ಪ್ರಜಾವಾಣಿ ವಾರ್ತೆ
Published 2 ಜನವರಿ 2014, 8:43 IST
Last Updated 2 ಜನವರಿ 2014, 8:43 IST

ಕುಶಾಲನಗರ: ಸೋಮವಾರಪೇಟೆ ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು 2014-–15ನೇ ಸಾಲಿನಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಸುಮಾರು ₨ 50 ಲಕ್ಷದ ವಾರ್ಷಿಕ ಕ್ರಿಯಾ ಯೋಜನೆಗೆ ಪ್ರಸ್ತಾವನೆ ಸಲ್ಲಿಸಲು ಮಂಗಳವಾರ ನಡೆದ ಮಾಸಿಕ ಸಾಮಾನ್ಯ ಸಭೆಯಲ್ಲಿ  ತೀರ್ಮಾನಿಸಲಾಯಿತು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಎಂ.ಬಿ. ಜಯಂತ್ ಅಧ್ಯಕ್ಷತೆಯಲ್ಲಿ ಕುಶಾಲನಗರದ ಸಮಿತಿ ಆವರಣದಲ್ಲಿ ನಡೆದ ಸಭೆಯಲ್ಲಿ ಕ್ರಿಯಾ ಯೋಜನೆ ಬಗ್ಗೆ ಚರ್ಚಿಸಿ ಸೋಮವಾರಪೇಟೆ ಉಪ-ಮಾರುಕಟ್ಟೆ ಮತ್ತು ಕುಶಾಲನಗರ ಮಾರುಕಟ್ಟೆ ಹಾಗೂ ಇತರೆಡೆಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ತೀರ್ಮಾನಿಸಲಾಯಿತು.

ವಾರ್ಷಿಕ ಕ್ರಿಯಾಯೋಜನೆಯನ್ನು ತಯಾರಿಸಿ ಮುಂದಿನ ಮಾಸಿಕ ಸಭೆಯಲ್ಲಿ ಅನುಮೋದನೆ ಪಡೆದ ಬಳಿಕವೇ ಬೆಂಗಳೂರು ಕೃಷಿ ಮಾರಾಟ ಇಲಾಖೆಯ ನಿರ್ದೇಶಕರಿಗೆ ಕಳುಹಿಸಿಕೊಡಲು ನಿರ್ಧರಿಸಲಾಯಿತು.

ಜಿಲ್ಲಾ ಪಂಚಾಯಿತಿ ಮುಂದಿನ ಸಾಲಿನಲ್ಲಿ ಬಿಡುಗಡೆ ಮಾಡುವ ಅನುದಾನದಿಂದ ಕೂಡಿಗೆ ಮತ್ತು ಹೆಬ್ಬಾಲೆ ಗ್ರಾಮೀಣ ಸಂತೆಗಳ ಆವರಣದಲ್ಲಿ ಸೋಲಾರ್ ದೀಪ ಅಳವಡಿಸಲು ಹಾಗೂ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು.  ಮಾರುಕಟ್ಟೆ ಸಮಿತಿಯು ನಿರ್ಮಿಸಿರುವ ವಾಣಿಜ್ಯ ಸಂಕೀರ್ಣದಲ್ಲಿ ಎರಡು ಮಳಿಗೆಗಳು ಖಾಲಿ ಉಳಿದಿದ್ದು, ಮುಂದಿನ ದಿನಗಳಲ್ಲಿ ಟೆಂಡರ್ ಕರೆದು ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧ್ಯಕ್ಷ ಜಯಂತ್ ಅವರು ಕಾರ್ಯದರ್ಶಿ ಅಯ್ಯಪ್ಪ ಅವರಿಗೆ ಸೂಚನೆ ನೀಡಿದರು.

ಉಪಾಧ್ಯಕ್ಷ ಡಿ.ಡಿ. ಪೊನ್ನಪ್ಪ, ನಿರ್ದೇಶಕರಾದ ಶಶಿ ಭೀಮಯ್ಯ, ಸತೀಶ್, ಧರ್ಮಪ್ಪ, ರಘು ಹೆಬ್ಬಾಲೆ, ಅಪ್ಪಸ್ವಾಮಿ, ಗಣಪತಿ, ನಾಗರಾಜು,  ಜಯಲಕ್ಷ್ಮಿ, ಎಸ್.ಬಿ. ಸುರೇಂದ್ರ, ಎಂ.ಎನ್. ಅಶೋಕ್,  ಕಾರ್ಯದರ್ಶಿ ಅಯ್ಯಪ್ಪ, ಮೇಲ್ವಿಚಾರಕ ತಿಮ್ಮೇಗೌಡ, ಎಂಜಿನಿಯರ್‌ ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.