ADVERTISEMENT

ವಾಹನ ಚಾಲನೆ; ರಸ್ತೆ ನಿಯಮಗಳ ಅರಿವಿರಲಿ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2017, 7:23 IST
Last Updated 27 ಅಕ್ಟೋಬರ್ 2017, 7:23 IST

ವಿರಾಜಪೇಟೆ: ವಾಹನ ಚಾಲನೆಗು ಮುನ್ನ ಪ್ರತಿಯೊಬ್ಬರಿಗೂ ರಸ್ತೆ ನಿಯಮಾವಳಿಗಳ ಅರಿವಿದ್ದರೆ ಅಪಘಾತಗಳ ಸಂಖ್ಯೆ ಇಳಿಮುಖವಾಗಲು ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಹೇಳಿದರು.

ಸಮೀಪದ ಮಗ್ಗುಲ ಗ್ರಾಮದ ಕೊಡಗು ದಂತ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ನಡೆದ ವಿದ್ಯಾರ್ಥಿ ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಕಾನೂನಿನ ಅರಿವಿನಿಂದ ಅಪಘಾತ ಮುಕ್ತ ವಾಹನ ಚಾಲನೆಗೆ ಅವಕಾಶವಾಗಲಿದೆ. ವಿದ್ಯಾರ್ಥಿಗಳು ಮಾದಕ ದ್ರವ್ಯ ಹಾಗೂ ದುಶ್ಚಟಗಳಿಂದ ದೂರವಿದ್ದು, ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು ಎಂದರು.

ವಿದ್ಯಾರ್ಥಿ ಒಕ್ಕೂಟದ ನೂತನ ಆಡಳಿತ ಮಂಡಳಿಯ ಪದಾಧಿ ಕಾರಿಗಳಿಗೆ ಕಾಲೇಜಿನ ಪ್ರಾಂಶುಪಾಲ ಕೆ.ಸಿ. ಪೊನ್ನಪ್ಪ ಪ್ರತಿಜ್ಞಾವಿಧಿ ಬೋಧಿಸಿದರು. ರಾಜೇಂದ್ರ ಪ್ರಸಾದ್ ವಿದ್ಯಾರ್ಥಿ ಒಕ್ಕೂಟದ ಪ್ರತಿನಿಧಿಗಳಿಗೆ ಅಧಿಕಾರ ಹಸ್ತಾಂತರಿಸಿದರು.

ADVERTISEMENT

ಕಾಲೇಜಿನ ಡೀನ್ ಸುನಿಲ್ ಮುದ್ದಯ್ಯ, ಉಪ ಪ್ರಾಂಶುಪಾಲ ಜಿತೇಶ್ ಜೈನ್, ಟೋನಿ ಜೋಸೆಫ್ ಉಪಸ್ಥಿತರಿದ್ದರು. ಸಮಾರಂಭದ ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.