ADVERTISEMENT

ವಿದ್ಯಾರ್ಥಿಗಳಿಗೆ ಎನ್‌ಎಸ್‌ಎಸ್ ಸಹಕಾರಿ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2012, 9:35 IST
Last Updated 5 ನವೆಂಬರ್ 2012, 9:35 IST

ಕುಶಾಲನಗರ: ವಿದ್ಯಾರ್ಥಿಗಳಿಗೆ ಎನ್‌ಎಸ್‌ಎಸ್ ಚಟುವಟಿಕೆಗಳು ಭವಿಷ್ಯದಲ್ಲಿ ಸ್ವಾವಲಂಬಿ ಜೀವನ ಕಂಡುಕೊಳ್ಳಲು ಸಹಕಾರಿ ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಟಿ.ಸ್ವಾಮಿ ಅಭಿಪ್ರಾಯಪಟ್ಟರು.

ಶಿರಂಗಾಲ ಸರ್ಕಾರಿ ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ನಲ್ಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎನ್‌ಎಸ್‌ಎಸ್ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.
ಎನ್‌ಎಸ್‌ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಸಮಯಪ್ರಜ್ಞೆ, ನಾಯಕತ್ವದ ಗುಣ, ಮಾನವೀಯ ಮೌಲ್ಯ ಬೆಳೆಸಲು ಉತ್ತಮ ವೇದಿಕೆ ಒದಗಿಸುತ್ತದೆ ಎಂದರು.

ಮುಖ್ಯ ಅತಿಥಿಯಾಗಿದ್ದ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಮಾಜಿ ಸಂಘಟನಾ ಕಾರ್ಯದರ್ಶಿ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮನ್ನು ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಾಗ ಜೀವನದಲ್ಲಿ ತೃಪ್ತಿ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಫರೀದಾಬೇಗಂ ಮಾತನಾಡಿದರು. ಶಿಬಿರಾಧಿಕಾರಿ    ಎಚ್.ಜೆ. ನಾಗರಾಜ್, ಶಿಬಿರದಲ್ಲಿ ಕೈಗೊಂಡ ಶ್ರಮದಾನ ಕಾರ್ಯದ ಕುರಿತು ವರದಿ ಮಂಡಿಸಿದರು. 
ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ    ಎಸ್.ಎಸ್.ಚಂದ್ರಶೇಖರ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಫಿಲಿಫ್‌ವಾಸ್ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

ತಾಲ್ಲೂಕು ಪಿಎಲ್‌ಡಿ ಬ್ಯಾಂಕಿನ ಉಪಾಧ್ಯಕ್ಷ ಪಾರ್ಥ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಯೋಗಾನಂದ, ಗ್ರಾಮ ಪಂಚಾಯಿತಿ ಸದಸ್ಯೆ ಅಂಬುಜ, ಮುಖ್ಯ ಶಿಕ್ಷಕ ಎಚ್.ಡಿ.ಸ್ವಾಮಿ, ಸಹ ಶಿಬಿರಾಧಿಕಾರಿಗಳಾದ ಎಚ್.ಆರ್. ಶಿವ   ಕುಮಾರ್, ವೀಣಾ, ಸ್ಥಳೀಯರಾದ ಜವರೇಗೌಡ, ನಿಂಗರಾಜಪ್ಪ, ಚೇತನ್, ಪ್ರದೀಪ್, ರಘು, ಅಶೋಕ್, ಗಣೇಶ್ ಇದ್ದರು. ಶಿಬಿರಾರ್ಥಿ ಮಹಾದೇವಸ್ವಾಮಿ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.