ADVERTISEMENT

`ವಿದ್ಯಾರ್ಥಿಗಳು ಸನ್ನಡತೆ ರೂಢಿಸಿಕೊಳ್ಳಿ'

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2013, 9:09 IST
Last Updated 5 ಸೆಪ್ಟೆಂಬರ್ 2013, 9:09 IST

ಕುಶಾಲನಗರ: ವಿದ್ಯಾರ್ಥಿಗಳು ಜೀವನದಲ್ಲಿ ಒಳ್ಳೆಯ ಗುಣಗಳನ್ನು ರೂಢಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಉಪನ್ಯಾಸಕ ಗುರುಸ್ವಾಮಿ ಕರೆ ನೀಡಿದರು.

ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಮಹಿಳಾ ಒಕ್ಕೂಟದಿಂದ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದು ವಿದ್ಯಾರ್ಥಿಗಳು ಆಧುನಿಕ ಬಣ್ಣದ ಬದುಕಿಗೆ ಮಾರು ಹೋಗುತ್ತಿದ್ದಾರೆ. ಅದರ ಫಲವಾಗಿ ದುಶ್ಚಟಗಳಿಗೆ ವಿದ್ಯಾರ್ಥಿಗಳೇ ಹೆಚ್ಚು ಬಲಿಯಾಗುತ್ತಿದ್ದಾರೆ. ಇದರಿಂದಾಗಿಯೇ ಸಮಾಜದಲ್ಲಿ ಅಪರಾಧಿಗಳ ಸಂಖ್ಯೆ ಹೆಚ್ಚಳವಾಗಲು ಕಾರಣವಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪಟ್ಟಣ ಪಂಚಾಯಿತಿ ಸದಸ್ಯ ಡಿ.ಕೆ. ತಿಮ್ಮಪ್ಪ ಅವರು ವಿದ್ಯಾರ್ಥಿಗಳಿಗೆ ಇಂತಹ ಅರಿವು ಮೂಡಿಸುವ ಕಾರ್ಯಕ್ರಮಗಳು ಹೆಚ್ಚಿನ ಪ್ರಮಾಣದಲ್ಲಿ ತುರ್ತಾಗಿ ಆಗಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲೆ ಮಾಲತಿ, ಉಪಪ್ರಾಂಶುಪಾಲೆ ಬಲ್ಕೀಸ್ ಭಾನು, ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಘದ ಕುಶಾಲನಗರ ವಲಯ ಮೇಲ್ವಿಚಾರಕ ಚಂದ್ರಶೇಖರ್, ಯೋಜನಾಧಿಕಾರಿ ಚಿದಾನಂದ ಮಹಿಳಾ ಒಕ್ಕೂಟದ ಕಾರ್ಯದರ್ಶಿ ಸುಶೀಲ, ಉಪಾಧ್ಯಕ್ಷೆ ಪಂಕಜ, ಕಾರ್ಯಕರ್ತೆಯರಾದ ಕೆ.ಎಂ. ಪಾರ್ವತಿ, ಲೋಲಾಕ್ಷಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.