ADVERTISEMENT

ವಿದ್ಯುತ್ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2017, 7:33 IST
Last Updated 13 ಅಕ್ಟೋಬರ್ 2017, 7:33 IST

ಸೋಮವಾರಪೇಟೆ: ಕೇಂದ್ರದಿಂದ ಸಮಗ್ರ ವಿದ್ಯುತ್ ಅಭಿವೃದ್ಧಿ ಯೋಜನೆಯಡಿ ಸೋಮವಾರಪೇಟೆ ವಿದ್ಯುತ್ ಉಪ ವಿಭಾಗದಲ್ಲಿ ಕೈಗೊಳ್ಳಲಿರುವ  ₹ 11.80 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಂಸದ ಪ್ರತಾಪ ಸಿಂಗ ಈಚೆಗೆ ಚಾಲನೆ ನೀಡಿದರು. ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆ.ಜಿ. ಬೋಪಯ್ಯ ಈ ಸಂದರ್ಭದಲ್ಲಿ ಹಾಜರಿದ್ದರು.

ಹಾನಗಲ್ಲು ಬಾಣೆಯಲ್ಲಿ ₹ 3.80 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಉಪ ವಿಭಾಗದ ಕಚೇರಿ, ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ ಮತ್ತು 66 ಕೆ.ವಿ. ವಿದ್ಯುತ್ ಪ್ರಸರಣಾ ಕೇಂದ್ರ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.

ಸೋಮವಾರಪೇಟೆ ಉಪ ವಿಭಾಗ ವ್ಯಾಪ್ತಿಯಲ್ಲಿ 60 ಟ್ರಾನ್ಸ್‌ ಮೀಟರ್‌ ಸೆಂಟರ್‌ಗಳು, ಇನ್ಸುಲೇಟೆಡ್ ಕೇಬಲ್‌ಗಳ ಅಳವಡಿಕೆ, ವಿದ್ಯುತ್ ವಾಹಕಗಳ ಸಾಮರ್ಥ್ಯ ವೃದ್ಧಿ, ಪವರ್ ಸ್ಟೇಷನ್‌ಗಳ ನವೀಕರಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.

ADVERTISEMENT

ಕೇಂದ್ರ ಸರ್ಕಾರ ವಿದ್ಯುತ್ ಅಭಾವವನ್ನು ತಪ್ಪಿಸಿ ಬೇಡಿಕೆಗಿಂತಲೂ ಅಧಿಕ ವಿದ್ಯುತ್ ಉತ್ಪಾದನೆಗೆ ಒತ್ತು ನೀಡುತ್ತಿದೆ ಎಂದು ಪ್ರತಾಪ ಸಿಂಹ ಇದೇ ಸಂದರ್ಭದಲ್ಲಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸದಸ್ಯ ಬಿ.ಜೆ. ದೀಪಕ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಸದಸ್ಯೆ ಹೆಚ್.ಎನ್. ತಂಗಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ವೆಂಕಟೇಶ್, ಸದಸ್ಯ ಪ್ರಕಾಶ್, ವಿಧಾನಪರಿಷತ್‌ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.