ADVERTISEMENT

ವಿಶೇಷ ಕಾನೂನು ಅರಿವು ಶಿಬಿರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2013, 5:12 IST
Last Updated 18 ಡಿಸೆಂಬರ್ 2013, 5:12 IST

ಮಡಿಕೇರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಕಾನೂನು ಸಾಕ್ಷರತಾ ರಥದ ಮೂಲಕ ವಿಶೇಷ ಕಾನೂನು ಅರಿವು ಶಿಬಿರಕ್ಕೆ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಎಸ್.ಆರ್.ಸೋಮಶೇಖರ್ ಅವರು ಚಾಲನೆ ನೀಡಿದರು.

  ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಎಂ.ವಿ.ಜಾಡರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ.ಆದ ಎಸ್.ಶೋಭಾ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ಆದ ಬಾಲಚಂದ್ರ ಎನ್.ಭಟ್, ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ಎಸ್.ಸಿದ್ದರಾಜು, ಓಡಿಪಿ ಸಂಸ್ಥೆಯ ಜಾಯ್ಸ್ ಮೆನೇಜಸ್ ಇದ್ದರು.

ಬಳಿಕ ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಾಹಿತಿ ಹಕ್ಕು ಅಧಿನಿಯಮ-2005,  ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬಾಲ ಕಾರ್ಮಿಕ ತಡೆ ಕಾಯ್ದೆ ಮತ್ತು ಎಫ್.ಐ.ಆರ್. ಹಾಗೂ ನಗರದ ಅಂಗನವಾಡಿ ತರಬೇತಿ ಸಂಸ್ಥೆಯಲ್ಲಿ ಗ್ರಾಹಕರ ಹಿತರಕ್ಷಣೆ ಮತ್ತು ಜೀವನಾಂಶ ಬಗ್ಗೆ ಕಾನೂನು ಅರಿವು ಶಿಬಿರ ನಡೆಯಿತು.

ಡಿ.18ರಂದು ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 10ಗಂಟೆಗೆ ವಿದ್ಯಾರ್ಥಿಗಳಲ್ಲಿ ಕಾನೂನಿನ ಅಗತ್ಯತೆ ಮತ್ತು ಜನನ ಮತ್ತು ಮರಣ ನೋಂದಣಿ, ಬೆಳಿಗ್ಗೆ 11.30ಗಂಟೆಗೆ ಭಾಗಮಂಡಲ ಕೆ.ವಿ.ಜಿ. ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ ತಡೆ ಕಾಯ್ದೆ ಮತ್ತು ರ್‌್ಯಾಗಿಂಗ್ ತಡೆ ಕಾಯ್ದೆ ಬಗ್ಗೆ ಹಾಗೂ ಮಧ್ಯಾಹ್ನ 3 ಗಂಟೆಗೆ ಕರಿಕೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ತ್ರೀಭ್ರೂಣ ಹತ್ಯೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಕಾನೂನು ಅರಿವು ಶಿಬಿರ ನಡೆಯಲಿದೆ.

ಡಿ.19ರಂದು ಬೆಳಿಗ್ಗೆ 10ಗಂಟೆಗೆ ಕಡಗದಾಳು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ವರದಕ್ಷಿಣೆ ನಿಷೇಧ ಅಧಿನಿಯಮ, ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ಸಂರಕ್ಷಣೆ) ಅಧಿನಿಯಮ-2000, ಮಧ್ಯಾಹ್ನ 12 ಗಂಟೆಗೆ ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಮತ್ತು ಮಕ್ಕಳ ಹಕ್ಕುಗಳು ಮತ್ತು ಜವಾಬ್ದಾರಿ ಬಗ್ಗೆ ಹಾಗೂ ಮಧ್ಯಾಹ್ನ 2.30ಗಂಟೆಗೆ ನೆಲ್ಯಹುದಿಕೇರಿ ಪದವಿ ಪೂರ್ವ ಕಾಲೇಜಿನಲ್ಲಿ ಮೋಟಾರು ವಾಹನ ಕಾಯ್ದೆ, ಭ್ರಷ್ಟಾಚಾರ ಪ್ರತಿಬಂಧಕ ಅಧಿನಿಯಮ ಬಗ್ಗೆ ಕಾನೂನು ಅರಿವು ಶಿಬಿರ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.