ADVERTISEMENT

ಸರ್ಕಾರಿ ಸೌಲಭ್ಯಗಳ ಸದುಪಯೋಗಕ್ಕೆ ಸಲಹೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2012, 8:10 IST
Last Updated 4 ಡಿಸೆಂಬರ್ 2012, 8:10 IST

ನಾಪೋಕ್ಲು: ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸರಿಸಮಾನವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ದೀರ್ಘಕೇಶಿ ಶಿವಣ್ಣ ಹೇಳಿದರು.

ಸಮೀಪದ ಮೂರ್ನಾಡಿನ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ನಗರ ವಿಶೇಷ ಯೋಜನೆ ಅಡಿಯಲ್ಲಿ ರೂ. 1.53 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಶೌಚಾಲಯ ಉದ್ಘಾಟಿಸಿ ಅವರು ಮಾತನಾಡಿದರು. ಶೌಚಾಲಯ ಶುಚಿತ್ವ ಕಾಯ್ದುಕೊಳ್ಳಬೇಕು ಎಂದರು.

ಕಾಂತೂರು ಮೂರ್ನಾಡು ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ ಕೇಶವ ಮಾತನಾಡಿ ಸ್ವಚ್ಛತೆ ಇಲ್ಲವಾದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದರು. ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕಿಶೋರ್ ಅಧ್ಯಕ್ಷತೆ ವಹಿಸಿದರು. ತಾಲ್ಲೂಕು ಪಂಚಾಯಿತಿ ಸದಸ್ಯ ವಿ.ವಿ. ಹರೀಶ್ ಕುಮಾರ್, ಮೇಲುಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷ ಶೇಕ್ ಅಹಮ್ಮದ್ ಮಾತನಾಡಿದರು.

ಶಾಲಾ ಸ್ಥಾಪಾನ ಸಮಿತಿ ಸದಸ್ಯೆ ಪ್ರೇಮಲತಾ ಗೋಪಾಲಕಷ್ಣ, ಶಾಲಾ ಮುಖ್ಯ ಶಿಕ್ಷಕ ಬಿ.ಜೆ.ಶಿವರಾಜ್, ಎಸ್‌ಡಿಎಂಸಿ ಸದಸ್ಯರಾದ ಫಾತಿಮಾ, ಚಂದ್ರಿಕಾ ಇದ್ದರು. ಶಾಲಾ ಮುಖ್ಯ ಶಿಕ್ಷಕ ಬಿ.ಜೆ. ಶಿವರಾಜ್ ಸ್ವಾಗತಿಸಿದರು. ಸಿಸಿಲಿಯಾ ಡಿಸೋಜ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.