ADVERTISEMENT

ಸಹಾಯವಾಣಿ ಕೇಂದ್ರ ಸ್ಥಾಪನೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಮೇ 2012, 5:30 IST
Last Updated 5 ಮೇ 2012, 5:30 IST

ಮಡಿಕೇರಿ: ಸರ್ಕಾರದಿಂದ ಸೌಲಭ್ಯ ಪಡೆಯುವ ಕುರಿತು ಭಾಷಾ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಅರಿವು ಮೂಡಿಸಲು ಜಿಲ್ಲಾಡಳಿತದ ವತಿಯಿಂದ ಕೂಡಲೇ ಸಹಾಯವಾಣಿ ಕೇಂದ್ರ ತೆರೆಯಬೇಕು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಆಗ್ರಹಿಸಿದರು.

ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 17 ಕೊಡವ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿದ್ದು, ಎರಡು ವೃತ್ತಿಪರ ವಿದ್ಯಾ ಸಂಸ್ಥೆಗಳು, ಎರಡು ಕಾಲೇಜುಗಳು ಹಾಗೂ ಪ್ರಾಥಮಿಕ ಶಿಕ್ಷಣ ಸಂಸ್ಥೆಗಳಿವೆ.

ಕೇವಲ ಒಂದು ಶಿಕ್ಷಣ ಸಂಸ್ಥೆ ಮಾತ್ರ ಸರ್ಕಾರದ ಸೌಲಭ್ಯಗಳನ್ನು ಪಡೆಯುತ್ತಿದೆ. ಉಳಿದ ಶಿಕ್ಷಣ ಸಂಸ್ಥೆಗಳು ಈ  ಸವಲತ್ತು ಪಡೆಯುವಲ್ಲಿ ವಿಫಲವಾಗಿವೆ ಎಂದರು. ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಸವಲತ್ತು ಪಡೆಯದಿರಲು ಮಾಹಿತಿ ಕೊರತೆಯೆ ಕಾರಣವಾಗಿದೆ.
 
ಅರಿವು ಮೂಡಿಸುವ ಸಲುವಾಗಿ ಸಹಾಯವಾಣಿಯ ಅವಶ್ಯಕತೆ ಇದೆ ಎಂದು ಅವರು ಹೇಳಿದರು. ಮಾಜಿ ಸೈನಿಕರಿಗೆ ಜಾಗ ಮಂಜೂರಾತಿಗಾಗಿ ಮಡಿಕೇರಿ ತಹಶೀಲ್ದಾರ್ ಕಚೇರಿಯಲ್ಲಿ ಕೌಂಟರ್ ತೆರೆದಿದ್ದು, ಅದು ಶಾಶ್ವತವಾಗಿ ಮುಂದುವರಿಯಬೇಕು. ಅರ್ಜಿ ನೀಡಲು ಅಂತಿಮ ದಿನ ನಿಗದಿ ಮಾಡಬಾರದು.
 
ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ, ರಕ್ಷಣಾ ಮಂತ್ರಿಗಳಿಗೆ ಮನವಿ    ಪತ್ರ ನೀಡಿರುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಿಎನ್‌ಸಿಯ ಕಲಿಯಂಡ ಪ್ರಕಾಶ್, ಪುಲ್ಲೆರ ಕಾಳಪ್ಪ, ಅಪ್ಪರಂಡ ಪ್ರಾಸಾದ್, ನಂದಿನೆರವಂಡ ವಿಜು ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.