ADVERTISEMENT

ಸಾರ್ವಜನಿಕರಿಗೆ ಪ್ರತಿಜ್ಞಾವಿಧಿ ಬೋಧನೆ

ಅಪ್ಪರಂಡ ಬಡಾವಣೆಯಲ್ಲಿ ಮತದಾರರ ಪಟ್ಟಿಗೆ ಹೆಸರು ನೋಂದಣಿ ಕಾರ್ಯ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2018, 9:33 IST
Last Updated 12 ಏಪ್ರಿಲ್ 2018, 9:33 IST

ಸುಂಟಿಕೊಪ್ಪ: ಚುನಾವಣಾ ಆಯೋಗದ ತಾಲ್ಲೂಕು ಸ್ವೀಪ್‌ ಕಾರ್ಯಕ್ರಮದ ಸಂಯೋಜಕ ಡಿ.ಡಿ.ಪೆಮ್ಮಯ್ಯ ಇಲ್ಲಿನ ಅಪ್ಪರಂಡ ಬಡಾವಣೆಯಲ್ಲಿ ಮತದಾರರ ಗುರುತಿನ ಚೀಟಿಗೆ ಹೆಸರು ನೋಂದಣಿ ಮಾಡುವಂತೆ ಹಾಗೂ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಮಂಗಳವಾರ ಪ್ರತಿಜ್ಞಾ ವಿಧಿ ಬೋಧಿಸಿದರು.

ಇಲ್ಲಿನ 2ನೇ ವಿಭಾಗದ ಅಪ್ಪರಂಡ ಬಡಾವಣೆಯಲ್ಲಿ ಮಂಗಳವಾರ ಮಧ್ಯಾಹ್ನ ಮತದಾರರ ಪಟ್ಟಿಗೆ ಯುವಕ ಯುವತಿಯರು ಸೇರಿದಂತೆ ಪ್ರತಿಯೊಬ್ಬ ಪ್ರಜೆಯೂ ಮತದಾನದ ಪವಿತ್ರ ಹಕ್ಕನ್ನು ಹೊಂದಲು ಆರ್ಹರಾಗಿರುತ್ತಾರೆ. 18 ವರ್ಷ ತುಂಬಿದ ಪ್ರತಿಯೊಬ್ಬರೂ ಚುನಾವಣಾ ಅಧಿಕಾರಿಗೆ ದಾಖಲೆಗಳನ್ನು ನೀಡಿ ಹೆಸರು ನೋಂದಾಯಿಸಿಕೊಳ್ಳಬೇಕು. ಮತದಾನದ ಹಕ್ಕು ಪಡೆದ ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದರು.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯ ಪಿಡಿಒ ಮೇದಪ್ಪ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನಿತ್ಯಾ, ಸಿಬ್ಬಂದಿ ಶ್ರೀನಿವಾಸ್, ಪುನೀತ್ ಕುಮಾರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.