ADVERTISEMENT

ಹೈಟೆನ್ಷನ್ ವಿದ್ಯುತ್ ಕಾಮಗಾರಿಗೆ ತಡೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2013, 10:54 IST
Last Updated 6 ಡಿಸೆಂಬರ್ 2013, 10:54 IST

ಮಡಿಕೇರಿ: ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಮೂಲಕ ಹಾದು ಹೋಗುತ್ತಿರುವ 400 ಕೆ.ವಿ. ಹೈಟೆನ್ಷನ್ ವಿದ್ಯುತ್ ಮಾರ್ಗದ ಕಾಮಗಾರಿಗೆ ವಿರಾಜಪೇಟೆ ಜೆಎಂಎಫ್‌ಸಿ ಹಿರಿಯ ವಿಭಾಗದ ನ್ಯಾಯಾಧೀಶರು ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದಾರೆ.

ವಿದ್ಯುತ್‌ ಮಾರ್ಗ ಹಾದುಹೋಗುವ ಸ್ಥಳವನ್ನು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಕ್ರಮಬದ್ಧವಾಗಿ ಮಾಡಲಾಗಿಲ್ಲ. ಏಕಪಕ್ಷೀಯವಾಗಿ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾವೇರಿ ಅವರು ನ್ಯಾಯಾಲಯಕ್ಕೆ ಆಕ್ಷೇಪ ಸಲ್ಲಿಸಿದ್ದರು.

ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿದ ಕಾವೇರಿ ಸೇನೆ ಸಂಚಾಲಕ ರವಿ ಚೆಂಗಪ್ಪ, ಮಾಲ್ದಾರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಜು ಬಿದ್ದಪ್ಪ ನ್ಯಾಯಾಲಯ ನೀಡಿದ ಆದೇಶದ ಪ್ರತಿಯನ್ನು ಸಿದ್ದಾಪುರ ಪೊಲೀಸರಿಗೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.