ADVERTISEMENT

‘ಕಾರ್ಮಿಕರ ಬೇಡಿಕೆ ಈಡೇರಿಸಿ’

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2013, 5:39 IST
Last Updated 21 ಸೆಪ್ಟೆಂಬರ್ 2013, 5:39 IST

ಮಡಿಕೇರಿ: ಕೇಂದ್ರ ಸರ್ಕಾರ ರಚಿಸಿದ್ದ ಕೇಂದ್ರ ಸಚಿವರ ಸಮಿತಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಶುಕ್ರವಾರ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್ ಜಿಲ್ಲಾ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಎದುರು ಶುಕ್ರವಾರ ಜಮಾಯಿಸಿದ ವಿವಿಧ ಕಾರ್ಮಿಕ ಸಂಘಟನೆಯ ಪ್ರಮುಖರು, ಕಾರ್ಮಿಕರ ಬೇಡಿಕೆಗಳನ್ನು ರಚಿಸಲಾಗಿರುವ ಕೇಂದ್ರ ಸಚಿವರ ಸಮಿತಿ ಕಾರ್ಮಿಕರ ಬಗ್ಗೆ ಯಾವುದೇ ಕಾಳಜಿ ವಹಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಂಘಟನೆಯ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಬೆಲೆ ಏರಿಕೆ ನಿಯಂತ್ರಣ ಮಾಡಬೇಕು. ಕಾರ್ಮಿಕರ ಎಲ್ಲ ಕುಟುಂಬಗಳಿಗೆ ಪಡಿತರ ವ್ಯವಸ್ಥೆ ನೀಡಬೇಕು. ಕಾರ್ಮಿಕ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿ­ಗೊಳಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಹಲವು ಕಾರಣಗಳಿಂದ ಕೆಲಸ ಕಳೆದುಕೊಳ್ಳುತ್ತಿರುವ ಕಾರ್ಮಿಕರ ಉದ್ಯೋಗ ರಕ್ಷಣೆಗೆ ವಿಶೇಷ ಪ್ಯಾಕೇಜ್‌ ಕಲ್ಪಿಸಬೇಕು. ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಖಾತ್ರಿ ಹಾಗೂ ಸಾಮಾಜಿಕ ಭದ್ರತಾ ನಿಧಿ ಸ್ಥಾಪಿಸುವಂತೆ ಅವರು ಆಗ್ರಹಿಸಿದರು.

ಸರ್ಕಾರ ವಿವಿಧ ಯೋಜನೆಗಳಡಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ– ಬಿಸಿಯೂಟ ಯೋಜನೆಯಲ್ಲಿ ಕೆಲಸ ಮಾಡುತ್ತಿರುವವರು, ಕಂಪ್ಯೂಟರ್‌ ಆಪರೇಟರ್‌ಗಳು ಹಾಗೂ ಆರೋಗ್ಯ ಕವಚ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹಮಾಲಿ ಸಂಘಟನೆ  ಹಾಗೂ ಗ್ರಾಮ ಪಂಚಾಯಿತಿ ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್‌. ಭರತ್‌, ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ ಪ್ರಧಾನ ಕಾರ್ಯದರ್ಶಿ ಎಚ್‌.ಬಿ. ರಮೇಶ್‌, ಬಿಎಸ್‌ಎನ್‌ಎಲ್‌ ಸಂಘಟನೆಯ ನೇಮಿಸ್‌, ಬಿಸಿಯೂಟ ಸಂಘಟನೆಯ ಕುಸುಮಾ, ಜಿಲ್ಲಾ ವರ್ಕರ್‌್ಸ ಯೂನಿಯನ್‌ನ ಮಹಾದೇವು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.