ವಿರಾಜಪೇಟೆ: ಈಚೆಗೆ ಶಿಕ್ಷಣ ಕ್ಷೇತ್ರದಲ್ಲಿ ವ್ಯಾಪಾರೀಕರಣ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಎಲ್ಲ ಶಿಕ್ಷಣ ಸಂಸ್ಥೆಗಳು ಶ್ರಮಿಸಬೇಕು ಎಂದು ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಲಹೆ ನೀಡಿದರು.
ಪಂಜರಪೇಟೆಯ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ವಿದ್ಯಾರ್ಥಿಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಿಕ್ಷಕರು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು, ವಿದ್ಯಾರ್ಥಿಗಳಿಗೂ ಮೌಲ್ಯಯುತವಾದ ಜೀವನವನ್ನು ನಡೆಸಲು ಪ್ರೇರೇಪಿಸುವ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ಅವರು ಹೇಳಿದರು.
ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರಿನ ಜಂಟಿ ನಿರ್ದೇಶಕ ಯೋಗಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ವಾರ್ಷಿಕ ಸಂಚಿಕೆ ‘ಹೊಂಬೆಳಕು’ ಹಾಗೂ ವಿದ್ಯಾರ್ಥಿಗಳ ಸಾಧನೆಯನ್ನು ಬಿಂಬಿಸುವ ‘ಪ್ರತಿಬಿಂಬ’ ಮಾಸಿಕ ಸಂಚಿಕೆಯನ್ನು ಜಂಟಿ ನಿರ್ದೇಶಕರಾದ ಯೋಗಾನಂದ ಬಿಡುಗಡೆಗೊಳಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಸರ್ವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಿ.ಜಿ. ಸೂರ್ಯಕುಮಾರಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಾಹಿದಾ ಶಾನ್‌ವಾಜ್ ಮಾತನಾಡಿದರು. ಆಡಳಿತ ಮಂಡಳಿಯ ಅಧ್ಯಕ್ಷೆ ಬಿ.ವಿ. ಶಶಿಕಲಾ ಅಡುವಪ್ಪ, ಸಂಸ್ಥೆಯ ಕಾರ್ಯದರ್ಶಿ ಬಿ.ಎಸ್. ಹರಿಪ್ರಸಾದ್, ಖಜಾಂಚಿ ಕೆ. ವಸಂತಿ ಶರತ್ಚಂದ್ರ, ಮೇಲ್ವಿಚಾರಕರಾದ ಕೆ.ಸಿ. ಶಬರೀಶ್, ಸಹ ಪ್ರಾಧ್ಯಾಪಕರಾದ ಮಿನಿ ಹಾಗೂ ಗಿರೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.