ADVERTISEMENT

ಕೊಡಗಿಗೆ ರಾಷ್ಟ್ರ ಪ್ರಶಸ್ತಿಯ ಗರಿ

ವಿಶ್ವ ಶೌಚಾಲಯ ದಿನಾಚರಣೆಯ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2019, 14:05 IST
Last Updated 4 ಜನವರಿ 2019, 14:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಕೇಂದ್ರದ ಕುಡಿಯುವ ನೀರು ಹಾಗೂ ನೈರ್ಮಲ್ಯಸಚಿವಾಲಯವು ‘ಸ್ವಚ್ಛ ಭಾರತ್‌ ಮಿಷನ್ ಅಭಿಯಾನ’ದಡಿ ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಕೊಡಗು ಜಿಲ್ಲೆಯು ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದೆ.

ದೇಶದ 25 ರಾಜ್ಯಗಳ 412 ಜಿಲ್ಲೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಕೊಡಗು ಜಿಲ್ಲೆಯು ರಾಷ್ಟ್ರಮಟ್ಟದಲ್ಲಿ 7ನೇ ಸ್ಥಾನ ಪಡೆಯುವ ಮೂಲಕ ಸ್ವಚ್ಛತೆಯ ಗರಿ ಮೂಡಿಸಿಕೊಂಡಿದೆ.

ನ. 9ರಿಂದ 19ರ ವರೆಗೆ ತ್ಯಾಜ್ಯ ನಿರ್ವಹಣೆ, ಶೌಚಾಲಯ ನಿರ್ಮಾಣ ಕುರಿತು ಅರಿವು ಮೂಡಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಗೆಸಚಿವಾಲಯವು ಸೂಚಿಸಿತ್ತು. ಅದರಂತೆ ಸ್ವಯಂ ಸೇವಾ ಸಂಸ್ಥೆ, ಸ್ತ್ರೀಶಕ್ತಿ ಸಂಘದ ನೆರವಿನಿಂದ ಜಿಲ್ಲೆಯಲ್ಲಿ ವಿವಿಧ ಚಟುವಟಿಕೆಗಳನ್ನು ನಡೆಸಲಾಗಿತ್ತು.

ADVERTISEMENT

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಜಿಲ್ಲೆಗಳು, ಕೇಂದ್ರಾಡಳಿತ ಪ್ರದೇಶಗಳ ಚಟುವಟಿಕೆಗಳನ್ನು ಪ್ರಶಸ್ತಿ ಪರಿಶೀಲನಾ ಸಮಿತಿಯು ಪರಿಶೀಲಿಸಿ ವಿಜೇತ ಜಿಲ್ಲೆಗಳನ್ನು ಆಯ್ಕೆ ಮಾಡಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.