ಕುಶಾಲನಗರ ಸಮೀಪದ ಕೊಡಗಿನ ಹಾರಂಗಿ ಜಲಾಶಯ
ಪ್ರಾತಿನಿಧಿಕ ಚಿತ್ರ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾನುವಾರ ದಿನವಿಡಿ ಎಡೆಬಿಡದೆ ಭಾರಿ ಮಳೆ ಸುರಿಯುತ್ತಿರುವುದರಿಂದ ಇಲ್ಲಿನ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ 10 ಸಾವಿರ ಕ್ಯುಸೆಕ್ ಗೆ ಏರಿಕೆಯಾಗಿದೆ.
ಕ್ಷಣ ಕ್ಷಣಕ್ಕೂ ಒಳಹರಿವು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವುದರಿಂದ 10 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.
ಇದರಿಂದ ಕಾವೇರಿ ಮತ್ತು ಹಾರಂಗಿ ನದಿ ದಂಡೆಯಲ್ಲಿ ಪ್ರವಾಹದ ಭೀತಿ ಸೃಷ್ಟಿಯಾಗಿದೆ.
ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ಜುಲೈ 15 ರಂದು ಆರೆಂಜ್ ಅಲರ್ಟ್ ಘೋಷಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.