ADVERTISEMENT

12,768 ಕುಟುಂಬಗಳಿಗೆ ವಿದ್ಯುತ್

ರಾಜೀವ್ ಗಾಂಧಿ ಗ್ರಾಮೀಣ ವಿದ್ಯುದ್ದೀಕರಣ ಯೋಜನೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2013, 10:44 IST
Last Updated 14 ಜೂನ್ 2013, 10:44 IST

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಾಜೀವ್ ಗಾಂಧಿ ಗ್ರಾಮೀಣ ವಿದ್ಯುದ್ದೀಕರಣ ಯೋಜನೆಯಡಿ ಆಯ್ದ ಗ್ರಾಮಗಳಲ್ಲಿ ಸುಮಾರು 12,768 ಬಿಪಿಎಲ್ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಸೋಮರಾಜು ತಿಳಿಸಿದರು.

ವಿದ್ಯುತ್ ಸಂಪರ್ಕವನ್ನು ಗ್ರಾಮೀಣ ಪ್ರದೇಶದ ಎಲ್ಲ ಬಡ ಕುಟುಂಬಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜೀವ್ ಗಾಂಧಿ ಗ್ರಾಮೀಣ ವಿದ್ಯುದ್ದೀಕರಣ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳೀದ್ದಾರೆ.

ಈ ಯೋಜನೆಯಡಿ ಆಯ್ಕೆಯಾಗಿರುವ 6 ಗ್ರಾಮಗಳ ಬಿಪಿಎಲ್ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

ಮಡಿಕೇರಿ ತಾಲ್ಲೂಕಿನಲ್ಲಿ ರಾಜೀವ್ ಗಾಂಧಿ ಗ್ರಾಮೀಣ ವಿದ್ಯುದ್ದೀಕರಣ ಯೋಜನೆಯಡಿ 4780 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕೈಗೆತ್ತಿಕೊಳ್ಳಲಾಗಿದ್ದು, ಇದರಲ್ಲಿ 21 ಗ್ರಾಮಗಳ 1735 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇನ್ನೂ 5 ಗ್ರಾಮಗಳಲ್ಲಿನ 205 ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಇದೆ ಎಂದು ಹೇಳಿದ್ದಾರೆ.

41 ಗ್ರಾಮಗಳಲ್ಲಿ 2840 ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಿದ್ದು, ಎರಡನೇ ಹಂತದಲ್ಲಿ ಫಲಾನುಭವಿಗಳ ಪಟ್ಟಿಯಲ್ಲಿನ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದಿದ್ದಾರೆ.

ವಿರಾಜಪೇಟೆ ತಾಲ್ಲೂಕಿನಲ್ಲಿ ಆಯ್ದ 85 ಗ್ರಾಮಗಳಲ್ಲಿ ಈ ಕಾರ್ಯ ಕೈಗೆತ್ತಿಕೊಳ್ಳಲಾಗಿದ್ದು, ಈ ಗ್ರಾಮಗಳ ಸುಮಾರು 5,517 ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇನ್ನೂ 7 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಿದೆ ಎಂದು ತಿಳಿಸಿದ್ದಾರೆ.

ಸೋಮವಾರಪೇಟೆ ತಾಲ್ಲೂಕಿನಲ್ಲಿ 118 ಗ್ರಾಮಗಳಲ್ಲಿನ 5,322 ಬಿಪಿಎಲ್ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇನ್ನೂ 8 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.