ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು
ಮಡಿಕೇರಿ: ಇಲ್ಲಿನ ಸೋಮವಾರಪೇಟೆ ತಾಲ್ಲೂಕಿನ ಮುಟ್ಲು ಗ್ರಾಮದಲ್ಲಿ 15 ವರ್ಷದ ಬಾಲಕಿಯೊಬ್ಬಳ ರುಂಡ ಕಡಿದ ಪ್ರಕಾಶ್ (32) ಎಂಬಾತ ಗುರುವಾರ ರಾತ್ರಿ ರುಂಡದೊಂದಿಗೆ ಪರಾರಿಯಾಗಿದ್ದಾನೆ.
'ಬಾಲಕಿಗೂ ಆರೋಪಿಗೂ ಮದುವೆ ನಿಶ್ಚಿತಾರ್ಥ ಗುರುವಾರ ನಡೆಯುತ್ತಿದ್ದ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಡೆದು ಬಾಲ್ಯ ವಿವಾಹ ಮಾಡಬಾರದು ಎಂದು ಪೋಷಕರ ಮನವೊಲಿಸಿದ್ದಾರೆ. ನಂತರ ರಾತ್ರಿ ಮನೆಗೆ ನುಗ್ಗಿದ ಆರೋಪಿಯು ಬಾಲಕಿಯನ್ನು ಅಪಹರಿಸಿದ್ದಾನೆ. ಕಾಡಂಚಿನ ಪ್ರದೇಶದಲ್ಲಿ ಬಾಲಕಿಯನ್ನು ಕೊಂದು ರುಂಡದೊಂದಿಗೆ ಪರಾರಿಯಾಗಿದ್ದಾನೆ. ಬಾಲಕಿಯ ಮುಂಡ ಮಾತ್ರ ಸಿಕ್ಕಿದ್ದು ಆರೋಪಿಗಾಗಿ ಹಾಗೂ ದೇಹದ ಉಳಿದ ಭಾಗಗಳಿಗಾಗಿ ಹುಡುಕಾಟ ನಡೆದಿದೆ. ಸಮೀಪದ ಶಾಲೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಗುರುವಾರವಷ್ಟೇ ಉತ್ತೀರ್ಣಳಾಗಿದ್ದಳು. ಆ ಶಾಲೆಯಲ್ಲಿದ್ದ ಏಕೈಕ ವಿದ್ಯಾರ್ಥಿನಿ ಈಕೆ ಆಗಿದ್ದಳು' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.
ಘಟನೆಯಲ್ಲಿ ಬಾಲಕಿಯ ತಾಯಿಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ವಿಚಾರಣೆ ಮಾಡಿದ ಬಳಿಕ ಕೃತ್ಯಕ್ಕೆ ಖಚಿತ ಕಾರಣ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕಾಶ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.