ADVERTISEMENT

21ರಿಂದ 5ನೇ ಕಾಫಿ ಉತ್ಸವ

​ಪ್ರಜಾವಾಣಿ ವಾರ್ತೆ
Published 6 ಜನವರಿ 2014, 6:01 IST
Last Updated 6 ಜನವರಿ 2014, 6:01 IST

ಮಡಿಕೇರಿ: ಕಾಫಿ ಉದ್ಯಮವನ್ನು ಪ್ರೋತ್ಸಾಹಿಸಿ, ಬೆಳೆಸುವ ನಿಟ್ಟಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರಲಾ ಗುತ್ತಿರುವ 5ನೇ ಅಂತರರಾಷ್ಟ್ರೀಯ ಕಾಫಿ ಉತ್ಸವವು ಜ. 21ರಿಂದ 25ರವೆರೆಗೆ ಬೆಂಗಳೂರಿನ ಲಲಿತ್‌ ಅಶೋಕ್‌ ಸಭಾಂಗಣದಲ್ಲಿ ನಡೆಯಲಿದೆ ಕಾಫಿ ಮಂಡಳಿ ಅಧ್ಯಕ್ಷ ಜಾವೇದ್‌ ಅಕ್ತರ್‌ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಎಂ. ವೀರಪ್ಪ ಮೊಯಿಲಿ, ಸಿ.ಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ ಎಂದರು.

ಕಾಫಿ ಉದ್ಯಮ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ಇಂಡಿಯಾ ಕಾಫಿ ಟ್ರಸ್ಟ್‌ ಅನ್ನು ರಚನೆ ಮಾಡಿ ಕಾಫಿ ಉತ್ಸವಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಯುವಪೀಳಿಗೆಗೆ ಕಾಫಿ ಉದ್ಯಮದ ಬಗ್ಗೆ ಜಾಗೃತಿ ಮೂಡಿಸು ವದರೊಂದಿಗೆ ಉದ್ಯಮವನ್ನು ಪ್ರೋತ್ಸಾಹಿಸುವ ಸಲುವಾಗಿ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಈ ಬಾರಿಯ ಕಾಫಿ ಉತ್ಸವದಲ್ಲಿ ಜ.21 ಹಾಗೂ ಜ.22ರಂದು ಕಾರ್ಯಾಗಾರವನ್ನು ಹಾಗೂ ಜ.23ರಿಂದ 25 ರವರೆಗೆ ಪ್ರದರ್ಶನ, ವಿಚಾರಗೋಷ್ಠಿ, ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

‘ದಿ ಚೇಂಜಿಂಗ್‌ ಫೇಸ್‌ ಆಫ್‌ ಕಾಫಿ’ ಎಂಬ ಧ್ಯೇಯ ವಾಕ್ಯದಡಿ ಉತ್ಸವ ನಡೆಯಲಿವೆ ಎಂದರು. ಸಾರ್ವಜನಿಕ ಸಂಪರ್ಕಾಧೀಕಾರಿ ಸಂಜಯ್‌ ಬೊಸ್‌ ಉತ್ಸವದ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.