ADVERTISEMENT

29,300 ಹೆಕ್ಟೇರ್‌ನಲ್ಲಿ ಬತ್ತ ನಾಟಿ ಪೂರ್ಣ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2013, 6:01 IST
Last Updated 4 ಸೆಪ್ಟೆಂಬರ್ 2013, 6:01 IST

ಮಡಿಕೇರಿ: ಜಿಲ್ಲೆಯಲ್ಲಿ 29,300 ಹೆಕ್ಟೇರ್ ಪ್ರದೇಶದಲ್ಲಿ ಬತ್ತ ನಾಟಿಯಾಗಿ ನಿಗದಿತ ಗುರಿಯಲ್ಲಿ ಶೇ 84ರಷ್ಟು ನಾಟಿ ಕಾರ್ಯ ಪೂರ್ಣಗೊಂಡಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಮಕೃಷ್ಣ ಅವರು ತಿಳಿಸಿದ್ದಾರೆ.

ಮಡಿಕೇರಿ ತಾಲ್ಲೂಕಿನಲ್ಲಿ 8 ಸಾವಿರ ಹೆಕ್ಟೇರ್ ಪ್ರದೇಶದ ಗುರಿಯಲ್ಲಿ 5,960 ಹೆಕ್ಟೇರ್ ಪ್ರದೇಶದಲ್ಲಿ ನಾಟಿ ಮಾಡಲಾಗಿದೆ.  ಸೋಮವಾರಪೇಟೆ  ತಾಲೂಕಿನಲ್ಲಿ 11 ಸಾವಿರ ಹೆಕ್ಟೇರ್ ಪ್ರದೇಶದ ಗುರಿಯಲ್ಲಿ 10,590 ಹೆಕ್ಟೇರ್ ಪ್ರದೇಶದಲ್ಲಿ ಬತ್ತದ ನಾಟಿ ಮಾಡಲಾಗಿದೆ.  ವಿರಾಜಪೇಟೆ ತಾಲ್ಲೂಕಿನಲ್ಲಿ16 ಸಾವಿರ ಹೆಕ್ಟೇರ್ ಪ್ರದೇಶದ ಗುರಿಯಲ್ಲಿ 12,750 ಹೆಕ್ಟೇರ್ ಪ್ರದೇಶದಲ್ಲಿ ನಾಟಿ ಕಾರ್ಯವಾಗಿದೆ.

ಬತ್ತ ನಾಟಿಯ 35 ಸಾವಿರ ಹೆಕ್ಟೇರ್ ಪ್ರದೇಶದ ಗುರಿಯಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ 31,235 ಹೆಕ್ಟೇರ್ ಪ್ರದೇಶದಲ್ಲಿ ನಾಟಿ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ

ಮುಸುಕಿನ ಜೋಳವನ್ನು 3,500 ಹೆಕ್ಟೇರ್ ಪ್ರದೇಶದ ಗುರಿಯಲ್ಲಿ 3,340 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದ್ದು, ಶೇ.95ರಷ್ಟು ಬಿತ್ತನೆ ಕಾರ್ಯವಾಗಿದೆ.

ಕಳೆದ ವರ್ಷ ಮುಸುಕಿನ ಜೋಳ 3,864 ಬಿತ್ತನೆಯಾಗಿತ್ತು. ತಂಬಾಕು 250 ಹೆಕ್ಟೇರ್ ಪ್ರದೇಶದ ಗುರಿಯಲ್ಲಿ 195 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿ ಶೇ 78ರಷ್ಟು ಬಿತ್ತನೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.