ADVERTISEMENT

ಜಿಲ್ಲೆಯಲ್ಲಿ 4 ಕೋವಿಡ್‌ ಸಕ್ರಿಯ ಪ್ರಕರಣ

​ಪ್ರಜಾವಾಣಿ ವಾರ್ತೆ
Published 20 ಜುಲೈ 2022, 10:51 IST
Last Updated 20 ಜುಲೈ 2022, 10:51 IST

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ 4 ಮಂದಿಗೆ ಕೊರೊನಾ ಸೋಂಕು ತಗುಲಿದೆ.

‘ಸೋಮವಾರಪೇಟೆ ಹಾಗೂ ವಿರಾಜಪೇಟೆಯ ತಲಾ ಇಬ್ಬರಲ್ಲಿ ಸೋಂಕು ಪತ್ತೆಯಾಗಿದ್ದು, ಯಾರಿಗೂ ಸೋಂಕಿನ ಯಾವುದೇ ಲಕ್ಷಣಗಳೂ ಇಲ್ಲ.ಒಟ್ಟು 761 ಮಂದಿಯ ಗಂಟಲುದ್ರವ ಮಾದರಿಯನ್ನು ಪರೀಕ್ಷಿಸಲಾಗಿತ್ತು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.

ಉಳಿದಂತೆ, 19 ಡೆಂಗಿ ಪ್ರಕರಣಗಳು, ತಲಾ ಎರಡು ಮಲೇರಿಯಾ ಹಾಗೂ ಇಲಿಜ್ವರದ ಪ್ರಕರಣಗಳು ಕಂಡು ಬಂದಿದ್ದರೆ, ಒಬ್ಬರಲ್ಲಿ ಮಾತ್ರ ಚಿಕುನ್‌ಗುನ್ಯಾ ಪತ್ತೆಯಾಗಿದೆ ಎಂದು ಹೇಳಿದರು.

ADVERTISEMENT

ಕೋವಿಡ್ ಸೇರಿದಂತೆ ಎಲ್ಲ ಬಗೆಯ ರೋಗಗಳು ಜಿಲ್ಲೆಯಲ್ಲಿ ನಿಯಂತ್ರಣದಲ್ಲಿದ್ದು, ಜನರು ಆತಂಕಪಡಬಾರದು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.