ಕುಶಾಲನಗರ: ವಾಸವಿ ಯುವಜನ ಸಂಘ ಮತ್ತು ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಹಾಗೂ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಆಶ್ರಯದಲ್ಲಿ ವಾಸವಿ ಜಯಂತಿಯ ಅಂಗವಾಗಿ ಇಲ್ಲಿನ ವಾಸವಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 44 ಯೂನಿಟ್ ರಕ್ತ ಸಂಗ್ರಹ ಮಾಡಲಾಯಿತು.
ಇದೇ ಸಂದರ್ಭ 50ನೇ ಬಾರಿ ರಕ್ತದಾನ ಮಾಡಿದ ಎಲ್.ಸಂತೋಷ್ ಅವರನ್ನು ವಾಸವಿ ಯುವಜನ ಸಂಘದಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಕೆ.ಎಸ್. ಶಿವಕುಮಾರ್ ಮಾತನಾಡಿ, ‘ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಆದರೆ, ರಕ್ತದಾನ ಮಾಡುವ ಬಗ್ಗೆ ಸಮಾಜದಲ್ಲಿ ತಪ್ಪು ಅಭಿಪ್ರಾಯಗಳಿವೆ’ ಎಂದರು.
ಮಡಿಕೇರಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಡಾ.ಕರುಂಬಯ್ಯ ಮಾತನಾಡಿ, ‘ಅಪಘಾತ, ತುರ್ತು ಚಿಕಿತ್ಸೆ ಹಾಗೂ ಅನೇಕ ಕಾಯಿಲೆಗಳ ಸಂದರ್ಭಗಳಲ್ಲಿ ರಕ್ತ ಬೇಕಾಗುತ್ತದೆ. ಆರೋಗ್ಯವಂತ ಯುವಕರು ರಕ್ತದಾನ ಮಾಡಲು ಮುಂದಾಗಬೇಕು’ ಎಂದರು.
ವಾಸವಿ ಯುವಕ ಸಂಘದ ಅಧ್ಯಕ್ಷ ಕೆ. ಪ್ರವೀಣ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಆರ್ಯವೈಶ್ಯ ಮಹಾಸಭಾ ಕಾರ್ಯಕಾರಿ ಮಂಡಳಿ ಸದಸ್ಯ ಬಿ.ಆರ್. ನಾಗೇಂದ್ರ ಪ್ರಸಾದ್, ಕರ್ನಾಟಕ ಆರ್ಯವೈಶ್ಯ ಮಹಾಸಭಾ ಕೊಡಗು ಜಿಲ್ಲಾ ಅಧ್ಯಕ್ಷ ಬಿ.ಎಲ್.ಸತ್ಯನಾರಾಯಣ, ಆರ್ಯವೈಶ್ಯ ಮಂಡಳಿಯ ಕಾರ್ಯದರ್ಶಿ ಬಿ.ಎಲ್.ಅಶೋಕ್, ಮಹಿಳಾ ಮಂಡಳಿ ಅಧ್ಯಕ್ಷೆ ಲಕ್ಷ್ಮೀ ಶ್ರೀನಿವಾಸ್, ಯುವತಿಯರ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಅಶ್ವಿನಿ ಸುಂದರ್, ವಾಸವಿ ಯುವಜನ ಸಂಘದ ಕಾರ್ಯದರ್ಶಿ ಬಿ.ಎನ್.ಅಂಜನ್, ಉಪಾಧ್ಯಕ್ಷ ವೈಶಾಖ್ ವಿ. ಮತ್ತು ಬಾಲಾಜಿ ವಿ.ಜೆ, ಸಹಕಾರ್ಯದರ್ಶಿ ನಾಗಶ್ರೇಯಸ್ಸ್ ವಿ.ಎಂ., ನಿರ್ದೇಶಕ ನಿಖಿಲ್ ಎನ್., ರವಿಪ್ರಕಾಶ್, ರಾಕೇಶ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.