ADVERTISEMENT

ಬಾಳಗೋಡು ಏಕಲವ್ಯ ಶಾಲೆಗೆ ₹ 5 ಕೋಟಿ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟ್ವೀಟ್‌

​ಪ್ರಜಾವಾಣಿ ವಾರ್ತೆ
Published 2 ಜನವರಿ 2020, 13:33 IST
Last Updated 2 ಜನವರಿ 2020, 13:33 IST
   

ಮಡಿಕೇರಿ: ರಾಜ್ಯದಲ್ಲಿರುವ ಬುಡಕಟ್ಟು ಇಲಾಖೆ ವ್ಯಾಪ್ತಿಯ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ (ಇಎಂಆರ್‌ಎಸ್‌) ಕೇಂದ್ರ ಸರ್ಕಾರವು ₹ 15 ಕೋಟಿ ಅನುದಾನ ಮಂಜೂರು ಮಾಡಿದೆ.

ಡಿ.31ರಂದು ಅನುದಾನ ಮಂಜೂರಾತಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಟ್ವೀಟ್‌ ಮಾಡಿದ್ದಾರೆ. ರಾಜ್ಯದ ಬೆಳಗಾವಿ, ಚಿಕ್ಕಮಗಳೂರು, ಕೊಡಗು ಶಾಲೆಗಳಿಗೆ ತಲಾ ₹ 5 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ವಿರಾಜಪೇಟೆ ತಾಲ್ಲೂಕಿನ ಬಾಳಗೋಡು ಶಾಲೆಗೂ ₹ 5 ಕೋಟಿ ಲಭಿಸಿದೆ.

‘ಸಮುದಾಯದ ಏಳ್ಗೆಯತ್ತ ಮತ್ತೊಂದು ಪುಟ್ಟ ಹೆಜ್ಜೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ’ ಎಂದು ಸಚಿವ ಸದಾನಂದಗೌಡ ಟ್ವೀಟ್‌ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.