ADVERTISEMENT

ನಾಣಯ್ಯ ಮನೆಗೆ ಸಿದ್ದರಾಮಯ್ಯ ಭೇಟಿ

​ಪ್ರಜಾವಾಣಿ ವಾರ್ತೆ
Published 10 ಜನವರಿ 2018, 6:31 IST
Last Updated 10 ಜನವರಿ 2018, 6:31 IST
ಮಾಜಿ ಸಚಿವ ಎಂ.ಸಿ. ನಾಣಯ್ಯ ಅವರ ನಿವಾಸಕ್ಕೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಚರ್ಚಿಸಿದರು
ಮಾಜಿ ಸಚಿವ ಎಂ.ಸಿ. ನಾಣಯ್ಯ ಅವರ ನಿವಾಸಕ್ಕೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಚರ್ಚಿಸಿದರು   

ಮಡಿಕೇರಿ: ಜೆಡಿಎಸ್‌ ಹಿರಿಯ ಮುಖಂಡ ಎಂ.ಸಿ.ನಾಣಯ್ಯ ಅವರ ನಿವಾಸಕ್ಕೆ ಮಂಗಳವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿನೀಡಿ ಚರ್ಚಿಸಿದರು. ನಾಣಯ್ಯ ಅವರು ಜೆಡಿಎಸ್‌ ತೊರೆಯಲು ಮುಂದಾಗಿರುವ ಕಾರಣ ಈ ಭೇಟಿ ಕುತೂಹಲ ಮೂಡಿಸಿದೆ. 20 ನಿಮಿಷ ಮಾತುಕತೆ ನಡೆಸಿದರು.

‘ನಾಣಯ್ಯ ಅವರು ನನ್ನ ಆತ್ಮೀಯರು. ಅವರ ಆರೋಗ್ಯ ವಿಚಾರಿಸಲು ಭೇಟಿ ನೀಡಿದ್ದು, ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ’ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ‘ರಾಜಕೀಯ ನಿಂತ ನೀರಲ್ಲ; ಅದು ಹರಿಯುತ್ತದೆ’ ಎಂದು ನಾಣಯ್ಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT