ADVERTISEMENT

‘ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕಪಾಠ‘

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2018, 8:47 IST
Last Updated 2 ಫೆಬ್ರುವರಿ 2018, 8:47 IST

ಕುಶಾಲನಗರ: ಬಜೆಟ್‌ನಲ್ಲಿ ರೈತರಿಗೆ ಸಾಲ ನೀಡಲು ₹11 ಲಕ್ಷ ಕೋಟಿ ಮೀಸಲಿಟ್ಟಿರುವುದು ದೇಶದ ಇತಿಹಾಸದಲ್ಲೇ ಯಾವ ಸರ್ಕಾರಗಳೂ ನೀಡದ ಕೊಡುಗೆಯಾಗಿದೆ ಎಂದು ಶಾಸಕ ಸಿ.ಟಿ.ರವಿ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಜಾತಿ ಮತ್ತು ದೇಶ ವಿಭಜನೆ ಮಾಡುವ ಶಕ್ತಿಗಳೊಂದಿಗೆ ಕಾಂಗ್ರೆಸ್ ಕೈಜೋಡಿಸಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರದಲ್ಲಿ ಕೊಲೆ ಸುಲಿಗೆ, ವ್ಯಪಕವಾದ ಭ್ರಷ್ಟಾಚಾರ ನೋಡಿದರೆ ಪಾಂಡವರು ಯಾರು? ಕೌರವರು ಯಾರು? ಎಂಬುದು ಗೊತ್ತಾಗುತ್ತಾದೆ. ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ADVERTISEMENT

ಬೂತ್‌ಮಟ್ಟದ ಸಶಕ್ತೀಕರಣ ಸಭೆ: ಬಿಜೆಪಿ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಗುರುವಾರ ಇಲ್ಲಿನ ಎಪಿಸಿಎಂಎಸ್‌ಸಿ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಜಿಲ್ಲಾ ಕಾರ್ಯಕಾರಿಣಿ ಹಾಗೂ ಬೂತ್‌ಮಟ್ಟದ ಸಶಕ್ತೀಕರಣ ಸಭೆಯನ್ನು ನಡೆಸಿತು.

ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ.ಭಾರತೀಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಶಾಸಕ ಸಿ.ಟಿ.ರವಿ, ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್‌ ಸದಸ್ಯ ಸುನೀಲ್ ಸುಬ್ರಮಣಿ, ಮಾಜಿ ಶಾಸಕ ಎಸ್.ಜಿ.ಮೇದಪ್ಪ, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಮುಖಂಡರಾದ ಬಿ.ಡಿ.ಮಂಜುನಾಥ್, ರವಿಕುಶಾಲಪ್ಪ, ಮನುಮುತ್ತಪ್ಪ, ರೀನಾ ಪ್ರಕಾಶ್, ವಿ.ಎಂ.ವಿಜಯ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.