ಶನಿವಾರಸಂತೆ (ಕೊಡಗು ಜಿಲ್ಲೆ): ಇಲ್ಲಿನ ಕೊಡ್ಲಿಪೇಟೆ ಹೋಬಳಿಯ ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಯಳ್ಳಿ ಗ್ರಾಮ ಸಮೀಪ 5 ಕಾಡಾನೆಗಳು ಬೀಡುಬಿಟ್ಟಿವೆ.
ತೋಟಗಳಿಂದ ಬಂದ 5 ಕಾಡಾನೆಗಳು ಮಂಗಳವಾರ ಬೆಳಿಗ್ಗೆ ದುಂಡಳ್ಳಿ ಗ್ರಾಮದ ಮುಖ್ಯ ರಸ್ತೆಯನ್ನು ದಾಟಿ ಲಕ್ಕೆಹನಲು ಗ್ರಾಮದ ಸಮೀಪ ಹೊರಟವು.
ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ರೈತರು ತೋಟ, ಗದ್ದೆಗಳಿಗೆ ತೆರಳಲು ಭಯಗೊಳ್ಳುವಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.