ಸುಂಟಿಕೊಪ್ಪ: ಸಮೀಪದ ಡಿ. ಪನ್ಯದ ಕಾಫಿ ತೋಟದಲ್ಲಿ ಮಂಗಳವಾರ ಕೆಲಸ ಮಾಡುತ್ತಿದ್ದಾಗ ಮರದ ಕೊಂಬೆ ಮೈಮೇಲೆ ಬಿದ್ದು ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಇದೇ ತೋಟದ ಲೈನ್ ಮನೆಯಲ್ಲಿ ವಾಸವಾಗಿರುವ ಕಾರ್ಮಿಕ ಬಪ್ಪಯ್ಯ ಅವರ ಪತ್ನಿ ಲಕ್ಷ್ಮಿ (46) ಮೃತಪಟ್ಟವರು.
ಎಂದಿನಂತೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಮರದ ಕೊಂಬೆ ಇವರ ತಲೆಯ ಮೇಲೆ ಬಿದ್ದಿದೆ. ಅದರ ಹೊಡೆತಕ್ಕೆ ಗಂಭೀರವಾಗಿ ಗಾಯಗೊಂಡ ಲಕ್ಷ್ಮಿ ಅವರನ್ನು ಸುಂಟಿಕೊಪ್ಪ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಆದರೆ ಆಸ್ಪತ್ರೆ ತಲುಪುವ ವೇಳೆಗೆ ಅವರು ಮೃತಪಟ್ಟಿದ್ದರು.
ಅವರಿಗೆ ಪತಿ, ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ.
ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.