ADVERTISEMENT

ವಿರಾಜಪೇಟೆ: ‘ಹಜ್ಜ್ ಯಾತ್ರೆಯಿಂದ ಏಕತೆ-ಸಮಾನತೆ’

​ಪ್ರಜಾವಾಣಿ ವಾರ್ತೆ
Published 8 ಮೇ 2025, 15:23 IST
Last Updated 8 ಮೇ 2025, 15:23 IST
ವಿರಾಜಪೇಟೆ ಸಮೀಪದ ಕೊಂಡಗೇರಿಯಲ್ಲಿ ಕೆ.ಎಂ.ಎ ವತಿಯಿಂದ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಹಜ್ಜ್ ಯಾತ್ರೆಗೆ ತೆರಳುತ್ತಿರುವ ಕೆ.ಎಂ.ಎ ನ ನಿರ್ದೇಶಕ ಕುಪ್ಪಂದಿರ ಕೆ. ಯೂಸುಫ್ ಹಾಜಿ ಅವರನ್ನು ಸನ್ಮಾನಿಸಲಾಯಿತು.
ವಿರಾಜಪೇಟೆ ಸಮೀಪದ ಕೊಂಡಗೇರಿಯಲ್ಲಿ ಕೆ.ಎಂ.ಎ ವತಿಯಿಂದ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಹಜ್ಜ್ ಯಾತ್ರೆಗೆ ತೆರಳುತ್ತಿರುವ ಕೆ.ಎಂ.ಎ ನ ನಿರ್ದೇಶಕ ಕುಪ್ಪಂದಿರ ಕೆ. ಯೂಸುಫ್ ಹಾಜಿ ಅವರನ್ನು ಸನ್ಮಾನಿಸಲಾಯಿತು.   

ವಿರಾಜಪೇಟೆ: ‘ಪವಿತ್ರ ಹಜ್ ಯಾತ್ರೆಯು ಯಾತ್ರಾರ್ಥಿಗಳಲ್ಲಿ ಏಕತೆ ಮತ್ತು ಸಮಾನತೆ ಭಾವನೆ ಮೂಡಿಸುತ್ತದೆ’ ಎಂದು ಕೊಡವ ಮುಸ್ಲಿಂ ಅಸೋಶಿಯೇಷನ್ ಅಧ್ಯಕ್ಷ ದುದ್ದಿಯಂಡ ಎಚ್. ಸೂಫಿ ಅಭಿಪ್ರಾಯಪಟ್ಟರು.

ಇಲ್ಲಿನ ಕೊಂಡಗೇರಿಯಲ್ಲಿ ಕೊಡವ ಮುಸ್ಲಿಂ ಅಸೋಸಿಯೇಷನ್ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ  ಮಾತನಾಡಿ, ‘ಆಧ್ಯಾತ್ಮಿಕ ಉತ್ಕರ್ಷ, ಸಮಾನತೆ, ಸಹೋದರತೆಗಳನ್ನು ಬೆಳೆಸಿ ಮುಂದಿನ ಕೆಡುಕು ರಹಿತ ಬದುಕು ಮತ್ತು ಆತ್ಮಪರಿಶುದ್ಧತೆಯನ್ನು ಏಕೀಕರಿಸುವುದರಲ್ಲಿ ಹಜ್ ಬಹು ದೊಡ್ಡ ಪಾತ್ರ ವಹಿಸುತ್ತದೆ’ ಎಂದರು.

ಕೆ.ಎಂ.ಎ ನಿರ್ದೇಶಕ ಕುಪ್ಪಂದಿರ ಕೆ.ಯೂಸುಫ್ ಹಾಜಿ ಹಜ್ ಯಾತ್ರೆಗೆ ತೆರಳುತ್ತಿರುವ ಹಿನ್ನೆಲೆ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಿ ಶುಭ ಕೋರಲಾಯಿತು.

ADVERTISEMENT

ಕಾರ್ಯಕ್ರಮದಲ್ಲಿ ಸಂಸ್ಥೆ ಹಿರಿಯ ಉಪಾಧ್ಯಕ್ಷ ಜೋಯಿಪೆರ ಡಾ. ಎ.ಕುಂಜ್ಹಬ್ದುಲ್ಲಾ, ಕೋಶಾಧಿಕಾರಿ ಹರಿಶ್ಚಂದ್ರ ಎ.ಹಂಸ, ಸಂಘಟನಾ ಕಾರ್ಯದರ್ಶಿ ಮೀತಲತಂಡ ಎಂ.ಇಸ್ಮಾಯಿಲ್, ನಿರ್ದೇಶಕ ಚಿಮ್ಮಿಚ್ಚಿರ ಕೆ. ಇಬ್ರಾಹಿಂ ಹಾಜಿ, ದುದ್ದಿಯಂಡ ಎಚ್. ಮೊಯ್ದು ಹಾಜಿ, ಆಲೀರ ಬಿ. ಅಬ್ದುಲ್ಲಾ, ಪುಡಿಯಂಡ ಇ. ಶಾದುಲಿ, ಮಂಡೇಂಡ ಎ. ಮೊಯ್ದು, ಪೊಯಕೆರ ಎಸ್. ರಫೀಕ್, ಪುದಿಯಾಣೆರ ಎಂ. ಹನೀಫ್, ಆಲೀರ ಎಚ್. ಅಬ್ದುಲ್ ಲತೀಫ್, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಈತಲತಂಡ ರಫೀಕ್ ತೂಚಮಕೇರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.