ಸೋಮವಾರಪೇಟೆ: ಆಷಾಢ ಮಾಸದ ಕೊನೆ ಶುಕ್ರವಾರ ಸೋಮೇಶ್ವರ ದೇವಾಲಯ ಹಾಗೂ ರಾಮ ಮಂದಿರಗಳಲ್ಲಿ ವಿಶೇಷ ಪೂಜೆ ನಡೆಯಿತು.
ಇಲ್ಲಿನ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ಚಾಮುಂಡೇಶ್ವರಿ ಬಳಗದಿಂದ ಮೊದಲನೇ ವರ್ಷದ ಆಷಾಢದ ಕೊನೆಯ ಶುಕ್ರವಾರದ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.
ಪಟ್ಟಣದ ವಾಹನ ನಿಲ್ದಾಣದಲ್ಲಿ ಚಾಮುಂಡೇಶ್ವರಿಯ ವಿಶೇಷ ಪೂಜಾ ಕಾರ್ಯಕ್ರಮಕ್ಕೆ ಉದ್ಯಮಿ ಗಿರಿಶ್ ಮಲ್ಲಪ್ಪ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು. ದೇವಿಗೆ ಅರ್ಚನೆಯೊಂದಿಗೆ ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಿತು.
ಈ ಸಂದರ್ಭ ವಾಹನ ಚಾಲಕರು, ಮಾಲೀಕರ ಸಂಘದ ಅಧ್ಯಕ್ಷ ಕೆ.ಜಿ.ಸುರೇಶ್, ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಹಿಂದೂ ಜಾಗರಣ ವೇದಿಕೆ ಸಂಚಾಲಕ ಸುಭಾಷ್ ತಿಮ್ಮಯ್ಯ, ಚಾಮುಂಡೇಶ್ವರಿ ಬಳಗದ ಸಂಚಾಲಕ ರೋಹಿತ್ ಪೂಜಾರಿ, ಪ್ರಮುಖರಾದ ಹೆಚ್.ಎಸ್. ಗಂಗಾ, ಕಾಶಿಗೋಪಾಲ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.