ADVERTISEMENT

ಸುಂಟಿಕೊಪ್ಪ | ಜ್ವರ, ತಲಸ್ಸೇಮಿಯಾದಿಂದ ಬಳಲುತ್ತಿದ್ದ ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 15 ಜುಲೈ 2024, 5:14 IST
Last Updated 15 ಜುಲೈ 2024, 5:14 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಸುಂಟಿಕೊಪ್ಪ (ಕೊಡಗು ಜಿಲ್ಲೆ): ಜ್ವರದಿಂದ ಬಳುತ್ತಿದ್ದ ಇಲ್ಲಿಗೆ ಸಮೀಪದ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಡೂರು ಗ್ರಾಮದ ವಂಶಿಕ್ (21) ಎಂಬುವವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮೃತಪ‌ಟ್ಟರು.

ತಲಸ್ಸೇಮಿಯಾ ಕಾಯಿಲೆಯಿಂದಲೂ ಇವರು ಬಳಲುತ್ತಿದ್ದರು. ಜ್ವರ ಕಾಣಿಸಿಕೊಂಡ ತಕ್ಷಣ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಪ್ಲೇಟ್‌ಲೇಟ್‌ಗಳ ಕೊರತೆಯಿಂದ ಇವರು ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

ADVERTISEMENT

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ.ಸತೀಶ್‌ಕುಮಾರ್, ‘ಡೆಂಗಿ ರೋಗದಿಂದ ಕೊಡಗಿನಲ್ಲಿ ಯಾವುದೇ ಸಾವು ಸಂಭವಿಸಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.