ADVERTISEMENT

ಮಡಿಕೇರಿಯಲ್ಲಿ ಎಬಿವಿಪಿ ಕರ್ನಾಟಕ ದಕ್ಷಿಣ ಪ್ರಾಂತ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 7:18 IST
Last Updated 16 ಡಿಸೆಂಬರ್ 2025, 7:18 IST
<div class="paragraphs"><p>ಎಬಿವಿಪಿ</p></div>

ಎಬಿವಿಪಿ

   

ಮಡಿಕೇರಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಕರ್ನಾಟಕ ದಕ್ಷಿಣ ಪ್ರಾಂತದ 45ನೇ ಪ್ರಾಂತ ಸಮ್ಮೇಳನ ಡಿ. 17, 18, 19ರಂದು ಇಲ್ಲಿನ ಕೊಡಗು ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.

‘ಈ ಸಮ್ಮೇಳನದಲ್ಲಿ ಕರ್ನಾಟಕ ದಕ್ಷಿಣ ಪ್ರಾಂತದ 9 ಸಂಘಟನಾತ್ಮಕ ವಿಭಾಗಗಳಿಂದ ಸುಮಾರು 600 ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಭಾಗವಹಿಸಲಿದ್ದಾರೆ. ಯುವ ಪುರಸ್ಕಾರ ಪ್ರಶಸ್ತಿಯನ್ನು ಬೆಂಗಳೂರಿನ ಸಾಮಾಜಿಕ ಸೇವಾಕಾರ್ಯಕರ್ತ ಮನೋಜ್ ನಂದೀಶಪ್ಪ ಅವರಿಗೆ ಪ್ರದಾನ ಮಾಡಲಾಗುತ್ತದೆ’ ಎಂದು ಸಂಘಟನೆ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯದರ್ಶಿ ಎಚ್.ಕೆ.ಪ್ರವೀಣ್  ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

18ರಂದು ಸಂಜೆ 4 ಗಂಟೆಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.