ಸುಂಟಿಕೊಪ್ಪ: ಇಲ್ಲಿನ ಶಾಂತಿಗೇರಿ ತೋಟದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಪಾದಚಾರಿ ವೃದ್ಧರೊಬ್ಬರಿಗೆ ವಾಹನವೊಂದು ಡಿಕ್ಕಿ ಹೊಡೆದ ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಸಮೀಪದ ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರ್ವಾಲೆ ಗ್ರಾಮದ ನಿವಾಸಿ ಸುಬ್ಬು (82) ಮೃತಪಟ್ಟವರು.
ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಗಂಗಧಾರಪ್ಪ, ಸಿಪಿಐ ರಾಜೇಶ್ ಕೋಟ್ಯಾನ್, ಪಿಎಸ್‌ಐ ಚಂದ್ರಶೇಖರ್ ಹಾಗೂ ಸಿಬ್ಬಂದಿ ತೆರಳಿ ಪರಿಶೀಲಿಸಿದರು.
ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.