ADVERTISEMENT

ಹಲ್ಲೆ ಪ್ರಕರಣ: 42 ವರ್ಷ ನಂತರ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2020, 2:20 IST
Last Updated 7 ಸೆಪ್ಟೆಂಬರ್ 2020, 2:20 IST
ವಿರಾಜಪೇಟೆ ಗ್ರಾಮಾಂತರ ಠಾಣೆಯ ಪೊಲೀಸರು ಹೊಡೆದಾಟದ ಪ್ರಕರಣವೊಂದರಲ್ಲಿ ಕಳೆದ 42 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ
ವಿರಾಜಪೇಟೆ ಗ್ರಾಮಾಂತರ ಠಾಣೆಯ ಪೊಲೀಸರು ಹೊಡೆದಾಟದ ಪ್ರಕರಣವೊಂದರಲ್ಲಿ ಕಳೆದ 42 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ   

ವಿರಾಜಪೇಟೆ: 42 ವರ್ಷಗಳ ಹಿಂದೆ ನಡೆದ ಹೊಡೆದಾಟದ ಪ್ರಕರಣವೊಂದರಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸ್ಥಳೀಯ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

1978 ರಲ್ಲಿ ಸಮೀಪದ ಕಂಡಂಗಾಲದಲ್ಲಿ ಆರೋಪಿ ಬಿ. ಲಾಲು ಹಾಗೂ ಆತನ ತಂದೆ ಉತ್ತಪ್ಪ ಎಂಬುವವರು ಅದೇ ಗ್ರಾಮದ ನಾಣಯ್ಯ ಅವರ ಮೇಲೆ ಹಲ್ಲೆ ನಡೆಸಿದ ಬಗ್ಗೆ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ನಂತರ ತಂದೆ ಹಾಗೂ ಮಗ ಇಬ್ಬರು ತಲೆಮರೆಸಿಕೊಂಡಿದ್ದರು.

ಉತ್ತಪ್ಪ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದು, ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದಲಾಲು, ಈಚೆಗೆ ಕೈಲ್ ಮುಹೂರ್ತ ಹಬ್ಬಕ್ಕೆಂದು ಗ್ರಾಮಕ್ಕೆ ಬಂಧಿರುವ ಸುದ್ದಿ ತಿಳಿದು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.