ಕುಶಾಲನಗರ: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಡಿ ಕಾರ್ಯನಿರ್ವಹಿಸುತ್ತಿರುವ ಇಲ್ಲಿನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಸಿಇಟಿ ಕೌನ್ಸೆಲಿಂಗ್ ಮೂಲಕ ಪ್ರವೇಶವಕಾಶ ಕಲ್ಪಿಸಿದೆ.
ಇಲ್ಲಿ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ (ಇ ಅಂಡ್ ಸಿ )ವಿಭಾಗ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗ ಸೇರಿದಂತೆ ಒಟ್ಟು 4 ಕೋರ್ಸ್‌ಗಳಿಗೆ ತಲಾ 60 ವಿದ್ಯಾರ್ಥಿಳಿಗೆ ಪ್ರವೇಶವಕಾಶ ಇದೆ. ಸದ್ಯ ಕಾಲೇಜಿನಲ್ಲಿ 805 ವಿದ್ಯಾರ್ಥಿಗಳಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪರಶಿವಮೂರ್ತಿ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿ ಸಿಇಟಿ ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳು ಪ್ರಥಮ ಆದ್ಯತೆ ಮೇರೆಗೆ ಈ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಈ ಕಾಲೇಜು ಆಧುನಿಕ ಸೌಲಭ್ಯಗಳೊಂದಿಗೆ ಉತ್ತಮ ಶಿಕ್ಷಣ ನೀಡುತ್ತಿದೆ. ಶೇ 100ರಷ್ಟು ಫಲಿತಾಂಶ ಗಳಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಾಹಿತಿಗೆ ದೂ: 08276 298230 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.