ಸುಂಟಿಕೊಪ್ಪ: ಸಮೀಪದ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆನರಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡ ವತಿಯಿಂದ ಮಡಿಕೇರಿಯ ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಸಹಯೋಗದಲ್ಲಿ ಜನ ಸುರಕ್ಷಾ ಆಂದೋಲನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕಿನ ವ್ಯವಸ್ಥಾಪಕ ಅನಿಕೇತ್ ಅವರು, ‘ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಆರ್ಥಿಕ ಸಮಾಲೋಚಕ ನಬಿ ಮಾತನಾಡಿ, ‘ಪ್ರತಿಯೊಬ್ಬರು ಮರು ಕೆವೈಸಿ ಕಡ್ಡಾಯವಾಗಿ ಮಾಡಿಸಬೇಕು’ ಎಂದು ಗ್ರಾಹಕರಿಗೆ ಸಲಹೆ ನೀಡಿದರು.
ಆರ್ಥಿಕ ಸಮಾಲೋಚಕ ಸಿ.ಜಿ.ಹರೀಶ್ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗನ್ನಾಥ್ ಮಾತನಾಡಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ ಕುಮಾರಿ, ಬ್ಯಾಂಕ್ ಆಫ್ ಬರೋಡದ ವ್ಯವಸ್ಥಾಪಕ ಸೆಲ್ವ ಕುಮಾರ್, ಬ್ಯಾಂಕ್ ಸಿಬ್ಬಂದಿ, ಗ್ರಾಹಕರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.