ADVERTISEMENT

ಕುಶಾಲನಗರ: ಸಾಲ ಮರು ಪಾವತಿ ಮಾಡಲು ಕೆ.ಕೆ.ಹೇಮಂತ್ ಕುಮಾರ್ ಸಲಹೆ

ಕುಶಾಲನಗರ: ಕೂಡು ಮಂಗಳೂರು ಸಹಕಾರ ಸಂಘದ ಸಭೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2024, 15:36 IST
Last Updated 10 ಅಕ್ಟೋಬರ್ 2024, 15:36 IST
ಕುಶಾಲನಗರ ಸಮೀಪದ ಕೂಡಿಗೆಯಲ್ಲಿರುವ ರಾಮೇಶ್ವರ ಕೂಡುಮಂಗಳೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ಮಾತನಾಡಿದರು, ಉಪಾಧ್ಯಕ್ಷ ಬಸಪ್ಪ,ನಿರ್ದೇಶಕರು,ಸಿಓ ಮೀನಾ ಭಾಗವಹಿಸಿದ್ದರು.
ಕುಶಾಲನಗರ ಸಮೀಪದ ಕೂಡಿಗೆಯಲ್ಲಿರುವ ರಾಮೇಶ್ವರ ಕೂಡುಮಂಗಳೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ಮಾತನಾಡಿದರು, ಉಪಾಧ್ಯಕ್ಷ ಬಸಪ್ಪ,ನಿರ್ದೇಶಕರು,ಸಿಓ ಮೀನಾ ಭಾಗವಹಿಸಿದ್ದರು.   

ಕುಶಾಲನಗರ: ‘ಸದಸ್ಯರು ಸಕಾಲದಲ್ಲಿ ಸಾಲ ಮರು ಪಾವತಿ ಮಾಡುವ ಮೂಲಕ ಸಂಘದ ಏಳಿಗೆಗೆ ಒತ್ತು ನೀ‍ಡಿ’ ಎಂದು ರಾಮೇಶ್ವರ ಕೂಡು ಮಂಗಳೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ಹೇಳಿದರು.

ಸಂಘದ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಸಂಘ 2023-24ನೇ ಸಾಲಿನಲ್ಲಿ ರೈತರಿಗೆ ಕೃಷಿ ಸಾಲ ಸೇರಿ ವಿವಿಧ ಸಾಲ ನೀಡುವ ಮೂಲಕ ವ್ಯವಹಾರ ನಡೆಸಿ ₹75.60 ಲಕ್ಷ ಲಾಭ ಗಳಿಸಿದೆ’ ಎಂದು ಹೇಳಿದರು.

 ‘ಉತ್ತಮ ಕಾರ್ಯನಿರ್ವಹಣೆಗೆ ಈ ಸಾಲಿನಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ರಾಜ್ಯ ಅಫೆಕ್ಸ್ ಬ್ಯಾಂಕ್ ಕೊಡ ಮಾಡುವ ಪುರಸ್ಕಾರಕ್ಕೆ ಸಂಘ ಭಾಜನವಾಗಿದೆ. ಮುಂದಿನ ದಿನಗಳಲ್ಲಿ ರೈತರ ಅಭಿವೃದ್ಧಿಗೆ ಪೂರಕವಾದ ಹೊಸ ಯೋಜನೆ ಹಮ್ಮಿಕೊಂಡು ರೈತರ ದಾಖಲೆ ಅನುಗುಣವಾಗಿ ಅಭಿವೃದ್ಧಿಗೆ ಹೊಸ ಸಾಲ ಸೌಲಭ್ಯ ಒದಗಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

 ಸಂಘದ ಸದಸ್ಯರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಸಭೆಯಲ್ಲಿ ಸಂಘದ ಉಪಾಧ್ಯಕ್ಷ ವಿ.ಬಸಪ್ಪ ಸೇರಿ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಮೀನಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.